ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Guarantee Schemes: ರಾಜ್ಯದ ಪಂಚ ಗ್ಯಾರಂಟಿ ಬಗ್ಗೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಮೆಚ್ಚುಗೆ

ಕರ್ನಾಟಕ ಸರ್ಕಾರದ ಗ್ಯಾರಂಟಿಗಳಿಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಹಿಳೆಯ ಸಬಲೀಕರಣಕ್ಕೆ ಕೆಲ ಯೋಜನೆಗಳನ್ನು ಜಾರಿ ತಂದಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್‌ ಯಾಂಗ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. . ಫಿಲೆಮನ್ ಯಾಂಗ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.

ಪಂಚ ಗ್ಯಾರಂಟಿ ಬಗ್ಗೆ ವಿಶ್ವಸಂಸ್ಥೆ ಅಧ್ಯಕ್ಷರ ಮೆಚ್ಚುಗೆ

Guarantee Schemes

Profile Vishakha Bhat Feb 9, 2025 12:42 PM

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿಗಳಿಗೆ (Guarantee Schemes) ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಹಿಳೆಯ ಸಬಲೀಕರಣಕ್ಕೆ ಕೆಲ ಯೋಜನೆಗಳನ್ನು ಜಾರಿ ತಂದಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್‌ ಯಾಂಗ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಸಬಲೀಕರಣ ಹಾಗೂ ಲಿಂಗ ಸಮಾನತೆ ತರುವಲ್ಲಿ ಈ ಯೋಜನೆಗಳ ಪಾತ್ರ ಮಹತ್ವದ್ದು ಎಂದು ಶ್ಲಾಘಿಸಿದ್ದಾರೆ. ಫಿಲೆಮನ್ ಯಾಂಗ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅವರು ಪಂಚಗ್ಯಾರಂಟಿಗಳ ಕುರಿತು ಅಭಿನಂದನೆ ಸಲ್ಲಿಸಿದ್ದಾರೆ.

ಫಿಲೆಮನ್ ಯಾಂಗ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅವರು ಪಂಚಗ್ಯಾರಂಟಿಗಳ ಕುರಿತು ಅಭಿನಂದನೆ ಸಲ್ಲಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಮಹಿಳೆಯರ ಕೈಗೆ ಹಣ ನೀಡುತ್ತಿವೆ. ಜತೆಗೆ ಶಕ್ತಿ ಯೋಜನೆಯಡಿಯ ಉಚಿತ ಬಸ್ ಪ್ರಯಾಣ, ಹಸಿವು ಮತ್ತು ಅಪೌಷ್ಟಿಕತೆ ತಡೆಗಟ್ಟುವ ಅನ್ನಭಾಗ್ಯ, ಗೃಹಜ್ಯೋತಿ ಅಡಿ ಉಚಿತ ವಿದ್ಯುತ್‌ ಸೇರಿ ಎಲ್ಲಾ ಗ್ಯಾರಂಟಿ ಯೋಜನೆಗಳೂ ಮಹಿಳೆಯರಿಗೆ ಉಪಯುಕ್ತವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾಗಿ ಮುಖ್ಯಮಂತ್ರಿ ಕಚೇರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ.40ರಷ್ಟು ಪಾಲನ್ನು ನವೀಕರಿಸಬಹುದಾದ ಮೂಲಗಳಿಂದ ಉತ್ಪಾದಿಸುವ ಮೂಲಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ರಾಜ್ಯವು ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ. ಅದೇ ರೀತಿ ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿ ಮತ್ತೆ (AI), ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆ ವಿಷಯದಲ್ಲೂ ಕರ್ನಾಟಕ ಸಾಧಿಸಿರುವ ಪ್ರಗತಿಯನ್ನು ಯಾಂಗ್‌ ಪ್ರಶಂಸಿದ್ದಾರೆ. ಪ್ರಮುಖ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ಕರ್ನಾಟಕವು ಹೇಗೆ ಉನ್ನತ ಸ್ಥಾನ ಪಡೆಯಲು ಸಾಧ್ಯವಾಯಿತು ಎಂಬುದರ ಕುರಿತು ವಿಶ್ವಸಂಸ್ಥೆಯ ಅಧ್ಯಕ್ಷರು ವಿವರಗಳನ್ನು ಕೋರಿದರು.

ಈ ಸುದ್ದಿಯನ್ನೂ ಓದಿ:Dinesh Gundu Rao: ವಿದ್ಯಾವಂತ ಯುವಕರಿಗೆ ʼಯುವ ನಿಧಿʼ ಯೋಜನೆ ತಲುಪಿಸಲು ಗ್ಯಾರಂಟಿಗಳ ಅನುಷ್ಠಾನ ಸಮಿತಿ ಸದಸ್ಯರು ಮುಂದಾಗಬೇಕು: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸಿದ್ದಕ್ಕಾಗಿ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಯವರನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಅಭಿನಂದಿಸಿದರು. ಭವಿಷ್ಯದ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶಸ್ಸಿನ ಬಗ್ಗೆ ಹಂಚಿಕೊಳ್ಳಲಾಗುವುದು. ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಯೋಜನೆಗಳನ್ನು ಅಳವಡಿಸಿಕೊಳ್ಳಬಹುದು ಎಂದು ಯಾಂಗ್ ಅಭಿಪ್ರಾಯಪಟ್ಟರು.