ವರುಣ್ ಚಕ್ರವರ್ತಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ನೀಡಬೇಕಿತ್ತು: ದಿನೇಶ್ ಕಾರ್ತಿಕ್!
ತಮಿಳುನಾಡಿನ ಮಿಸ್ಟ್ರಿ ಸ್ಪಿನ್ನರ್ ವರಣ್ ಚಕ್ರವರ್ತಿ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ 18 ವಿಕೆಟ್ ಪಡೆದಿದ್ದರು. ಅದೇ ಫಾರ್ಮ್ ಅನ್ನು ಇಂಗ್ಲೆಂಡ್ ವಿರುದ್ಧ ಮೊದಲನೇ ಟಿ20ಐ ಪಂದ್ಯದಲ್ಲಿ ಮುಂದುವರಿಸಿ 3 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ವರುಣ್ ಚಕ್ರವರ್ತಿಗೆ ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಲ್ಲಿಯೂ ಸ್ಥಾನ ನೀಡಬೇಕಿತ್ತು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಮುಂಬರುವ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ (Champions Trophy 2025) ಭಾರತ ತಂಡದಲ್ಲಿ ವರುಣ್ ಚಕ್ರವರ್ತಿಗೆ (Varun Chakravarthy) ಸ್ಥಾನ ನೀಡಬೇಕಿತ್ತು ಎಂದು ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಬುಧವಾರ ಈಡನ್ ಗಾರ್ಡನ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಮೊದಲನೇ ಟಿ20ಐ ಪಂದ್ಯದಲ್ಲಿ ವರುಣ್ ಚಕ್ರವರ್ತಿ 23 ರನ್‌ಗಳಿಗೆ 3 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರವರಿ 19 ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಿಸಿಸಿಐ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ಸ್ಪಿನ್ ವಿಭಾಗಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ವರುಣ್ ಚಕ್ರವರ್ತಿಗೆ ಸ್ಥಾನ ನೀಡದೆ ಬಿಸಿಸಿಐ ದೊಡ್ಡ ಎಡವಟ್ಟು ಮಾಡಿಕೊಂಡಿದೆ ಎಂದು ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಎಚ್ಚರಿಕೆ ನೀಡಿದ್ದಾರೆ.
ವರುಣ್ ಸ್ಪಿನ್ ಮೋಡಿಗೆ ಇಂಗ್ಲೆಂಡ್ ತತ್ತರ, ಅಭಿಷೇಕ್ ಅಬ್ಬರದಿಂದ ಭಾರತಕ್ಕೆ ಮೊದಲ ಜಯ!
ವರುಣ್ ಚಕ್ರವರ್ತಿಗೆ ಸ್ಥಾನ ನೀಡಬೇಕಿತ್ತು: ದಿನೇಶ್ ಕಾರ್ತಿಕ್
ಭಾರತದ ಪ್ರತಿಷ್ಠಿತ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ವರುಣ್ ಚಕ್ರವರ್ತಿಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪ್ರಕಟಿಸಿದ 15 ಸದಸ್ಯರ ತಂಡದಲ್ಲಿ ಸ್ಥಾನ ನೀಡದಿರುವುದು ದೊಡ್ಡ ಪ್ರಮಾಣದವಾಗಿದೆ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.
"ಫೆಬ್ರವರಿ 19 ರಂದು ಆರಂಭವಾಗಲಿರುವ ಪಾಕಿಸ್ತಾನದ ಆತಿಥ್ಯದಲ್ಲಿ ಎಂಟು ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅಜಿತ್ ಅಗರ್ಕರ್ ಸಾರಥ್ಯದ ಆಯ್ಕೆ ಮಂಡಳಿಯು ಅನುಭವಿ ಆಟಗಾರರಿಗೆ ಹೆಚ್ಚು ಮಣೆ ಹಾಕಿದೆ. ಕುಲ್ದೀಪ್ ಯಾದವ್ ಸೇರಿದಂತೆ ನಾಲ್ವರು ಸ್ಪಿನ್ನರ್‌ಗಳಿಗೆ ತಂಡದಲ್ಲಿ ಸ್ಥಾನ ನೀಡಿ ತಂಡದ ಆಯ್ಕೆಯನ್ನು ಪೂರ್ಣಗೊಳಿಸಿದೆ. ಆದರೆ ವರುಣ್ ಚಕ್ರವರ್ತಿಗೆ ಸ್ಥಾನ ನೀಡದಿರುವುದು ತಂಡಕ್ಕೆ ದೊಡ್ಡ ನಷ್ಟವಾಗಿದೆ," ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Varun Chakaravarthy scalped 3⃣ wickets & bagged the Player of the Match Award! 👌 👌
— BCCI (@BCCI) January 22, 2025
Scorecard ▶️ https://t.co/4jwTIC5zzs#TeamIndia | #INDvENG | @IDFCFIRSTBank pic.twitter.com/QqqC6Sz1e1
ಎರಡು ವರ್ಷಗಳ ನಂತರ ಕಮ್‌ಬ್ಯಾಕ್
2021ರಲ್ಲಿ ಟೀಮ್ ಇಂಡಿಯಾ ಪರ ಅಂತಿಮವಾಗಿ ಕಾಣಿಸಿಕೊಂಡಿದ್ದ ವರುಣ್ ಚಕ್ರವರ್ತಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. 2024ರ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಲು ವರುಣ್ ಚಕ್ರವರ್ತಿ ಮಹತ್ತರ ಪಾತ್ರ ವಹಿಸಿದ್ದರು.
ವರುಣ್ ಚಕ್ರವರ್ತಿಯ ಈ ಪ್ರದರ್ಶನ ಗಮನಿಸಿದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅವರು ತಂಡದಲ್ಲಿ ಸ್ಥಾನ ಕಲ್ಪಿಸಿದ್ದಾರೆ. ಅದರಂತೆ ವರುಣ್ ತಮ್ಮ ಕಮ್ ಬ್ಯಾಕ್ ಪಂದ್ಯದ ನಂತರ ಆಡಿರುವ 7 ಪಂದ್ಯಗಳಿಂದ ಒಂದು ಬಾರಿ ಐದು ವಿಕೆಟ್ ಸಾಧನೆ ಸೇರಿದಂತೆ 17 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಮೊದಲ ಪಂದ್ಯದಲ್ಲಿ ಆಂಗ್ಲ ಪಡೆಯ ಸ್ಟಾರ್ ಆಟಗಾರರಾದ ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಜೋಸ್ ಬಟ್ಲರ್ ಅವರ ವಿಕೆಟ್ ಪಡೆದಿದ್ದರು. ಆ ಮೂಲಕ ಭಾರತ ತಂಡದ 7 ವಿಕೆಟ್ ಗೆಲುವಿಗೆ ನೆರವು ನೀಡಿದ್ದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.