#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Viral Video: ರಸ್ತೆ ದಾಟುತ್ತಿದ್ದಾಗ ವೇಗವಾಗಿ ಡಿಕ್ಕಿ ಹೊಡೆದ ಟ್ರಕ್‌; ಸ್ಥಳದಲ್ಲೇ ಸಾವನ್ನಪ್ಪಿದ ಪ್ರಿನ್ಸಿಪಾಲ್‌

ಸರ್ಕಾರಿ ಶಾಲೆಯ ಪ್ರಾಂಶುಪಾಲೆಯೊಬ್ಬರು ರಸ್ತೆ ದಾಟುವಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಫತೇಪುರ್‌ನಲ್ಲಿ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಇದಕ್ಕೆ ಕಾರಣರಾದ ವ್ಯಕ್ತಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರಕ್‌ ಡಿಕ್ಕಿ ಹೊಡೆದು ಪ್ರಿನ್ಸಿಪಾಲ್‌ ಸ್ಥಳದಲ್ಲೇ ಬಲಿ! ಭೀಕರ ದೃಶ್ಯ ಫುಲ್‌ ವೈರಲ್‌

Accident Viral Video

Profile pavithra Jan 20, 2025 1:52 PM

ಲಖನೌ: ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲೆಯೊಬ್ಬರು ರಸ್ತೆ ದಾಟುವಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕಲ್ಯಾಣಪುರ ಪೊಲೀಸ್ ಠಾಣೆ ಬಳಿಯ ಸೋಹನ್ ಪೆಡಾ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು.ಮಾಲ್ವಾನ್ ಡೆವಲಪ್‌ಮೆಂಟ್‌ ಬ್ಲಾಕ್‍ನ ಮಾಯಾರಾಮ್ಖೇರಾ ಪ್ರಾಥಮಿಕ ಶಾಲೆಯ ಪ್ರಾಂಶುಪಾಲೆ ಸಂಗೀತಾ ತ್ರಿವೇದಿ ರಸ್ತೆ ದಾಟುತ್ತಿದ್ದಾಗ ಪಿಕಪ್ ಟ್ರಕ್‍ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ಪ್ರಾಂಶುಪಾಲೆ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ವೈರಲ್ ಆದ ವಿಡಿಯೊದಲ್ಲಿ ಪ್ರಾಂಶುಪಾಲೆ ರಸ್ತೆ ದಾಟುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ವೇಗವಾಗಿ ಬಂದ ಟ್ರಕ್‌ ಪ್ರಾಂಶುಪಾಲೆಯ ತಲೆಗೆ ಡಿಕ್ಕಿ ಹೊಡೆದಿದ್ದು ಅಲ್ಲದೇ ಮೈ ಮೇಲೆ ಹರಿದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಡಿಕ್ಕಿ ಹೊಡೆದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.



ಅಪಘಾತವನ್ನು ನೋಡಿದ ಪ್ರತ್ಯೇಕ್ಷದರ್ಶಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಾಂಶುಪಾಲರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ಶುರುಮಾಡಿದ್ದಾರೆ. ವೇಗವಾಗಿ ಚಲಿಸುವ ವಾಹನಗಳಿಂದಾಗಿ ಇಲ್ಲಿ ಅಪಘಾತಗಳು ಆಗಾಗ ಸಂಭವಿಸುತ್ತದೆ. ಹಾಗಾಗಿ ಈ ಘಟನೆಯ ನಂತರ ಸ್ಥಳೀಯರು ಈಗ ಈ ಪ್ರದೇಶದಲ್ಲಿ ಉತ್ತಮ ಸಂಚಾರ ನಿಯಮಗಳ ಜಾರಿ ಮಾಡಲು ಮತ್ತು ಸ್ಪೀಡ್ ಬ್ರೇಕರ್ಸ್‌ ಅಳವಡಿಸಲು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:ಭೀಕರ ರಸ್ತೆ ಅಪಘಾತ; ಕುಟುಂಬಸ್ಥರನ್ನು ಕಳೆದುಕೊಂಡ ಶೂಟರ್‌ ಮನು ಭಾಕರ್

ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದು, ಪಿಕಪ್ ಟ್ರಕ್ ಅನ್ನು ಗುರುತಿಸಲು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಇದಕ್ಕೆ ಕಾರಣರಾದ ವ್ಯಕ್ತಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.