Viral Video: ಜವರಾಯನ ಅಟ್ಟಹಾಸ! ಆಟ ಆಡ್ತಿದ್ದ ಮಗುವಿನ ಮೇಲೆ ಕಾರು ಹರಿದು ಸ್ಥಳದಲ್ಲೇ ಮೃತ್ಯು
ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಬಾಲಕಿ ಜೋಯಾ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಖಾಸಗಿ ಶಾಲಾ ಉದ್ಯೋಗಿಯೊಬ್ಬ ಮಗುವಿಗೆ ಡಿಕ್ಕಿ ಹೊಡೆದು ಎರಡು ವರ್ಷದ ಬಾಲಕಿ ಜೋಯಾ ಸಾವನ್ನಪ್ಪಿದ್ದಾಳೆ. ಕಾರು ಚಾಲಕ ಮುಂದೆ ಚಲಿಸಲು ಪ್ರಾರಂಭಿಸುತ್ತಿದ್ದಂತೆಯೇ ಮಗು ಮುಂದೆ ಓಡುತ್ತಿರುವುದನ್ನು ದೃಶ್ಯಗಳು ತೋರಿಸುತ್ತವೆ. ಚಾಲಕನ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ
ಚಂಡೀಗಡ: ಪಂಜಾಬ್‌ನ ಬರ್ನಾಲಾದಲ್ಲಿ ಖಾಸಗಿ ಶಾಲೆಯೊಂದರ ಮ್ಯಾನೇಜ್‌ಮೆಂಟ್‌ಗೆ ಸೇರಿದ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದ್ದು ಸದ್ಯ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.(Viral Video)
ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಬಾಲಕಿ ಜೋಯಾ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಖಾಸಗಿ ಶಾಲಾ ಉದ್ಯೋಗಿ ಯೊಬ್ಬ ಮಗುವಿಗೆ ಡಿಕ್ಕಿ ಹೊಡೆದು ಎರಡು ವರ್ಷದ ಬಾಲಕಿ ಜೋಯಾ ಸಾವನ್ನಪ್ಪಿದ್ದಾಳೆ. ಕಾರು ಚಾಲಕ ಮುಂದೆ ಚಲಿಸಲು ಪ್ರಾರಂಭಿಸುತ್ತಿದ್ದಂತೆಯೇ ಮಗು ಮುಂದೆ ಓಡುತ್ತಿರುವುದನ್ನು ದೃಶ್ಯಗಳು ಕಂಡು ಬರುತ್ತದೆ. ಚಾಲಕನ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧ ಕಾರಿನ ಚಾಲಕನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಮಗುವಿನ ತಂದೆ ಅವರ ಪತ್ನಿ ಮತ್ತು ತಮ್ಮ ಮಗಳೊಂದಿಗೆ ಚರ್ಚ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ತನ್ನ ಮಗಳು ಆಟವಾಡುತ್ತಿದ್ದಳು. ಆದರೆ ಚಾಲಕನ ನಿರ್ಲಕ್ಷ್ಯದಿಂದ ಅವಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತವಾದ ಸ್ಥಳ ಚಿಕ್ಕದಾಗಿದ್ದು, ಚಾಲಕ ಅತಿ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಶಾಲೆಯ ಉದ್ಯೋಗಿಗಳು ವಾಹನದಲ್ಲಿದ್ದವರು ಈ ಘಟನೆಗೆ ಕ್ಷಮೆಯಾಚಿಸಲಿಲ್ಲ. ತಮ್ಮ ಮಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಕೂಡ ಮಾಡಲಿಲ್ಲ ಎಂದು ಮಗುವಿನ ತಂದೆ ಶ್ರೀ ಕುಮಾರ್ ಎನ್ನುವವರು ಆರೋಪಿಸಿದ್ದಾರೆ.
ಇದನ್ನು ಓದಿ: Viral Video: ಕಂದಾಯ ಇಲಾಖೆಯ ಕಚೇರಿಯಲ್ಲಿ ಮಹಿಳೆಗೆ ಶೂನಿಂದ ಥಳಿಸಿದ ಗುಮಾಸ್ತ; ವಿಡಿಯೊ ವೈರಲ್
ಆರೋಪಿ ಚಾಲಕ ಜಸ್ವಿಂದರ್ ಸಿಂಗ್ ನನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸತ್ಬೀರ್ ಸಿಂಗ್ ತಿಳಿಸಿದ್ದಾರೆ. ಅವರು ಹರಿ ಯಾಣದ ಸಿರ್ಸಾ ನಿವಾಸಿಯಾಗಿದ್ದು ವಾಹನವನ್ನು ಸಹ ವಶ ಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಒಟ್ಟಿನಲ್ಲಿ ಚಾಲಕನ ನಿರ್ಲಕ್ಷ್ಯ ದಿಂದ ಮಗುವಿನ ಪ್ರಾಣವೇ ಹೋಗಿದ್ದು ಸದ್ಯ ಈ ಆಘಾತಕಾರಿ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.