ಭೋಪಾಲ್: ಗುಂಡು ಹಾರಿಸುವ ಶಬ್ದ ಕೇಳಿದರೆ ಸಾಕು ಎಲ್ಲರೂ ಬೆಚ್ಚಿ ಬೇಳುತ್ತಾರೆ. ಇತ್ತೀಚೆಗೆ ಮಧ್ಯಪ್ರದೇಶದ ಮೊರೆನಾದಲ್ಲಿ ಇಂತಹದೊಂದು ಘಟನೆ ನಡೆದಿದೆ. ಸಂಭ್ರಮಾಚರಣೆಗಾಗಿ ಹನ್ನೆರಡಕ್ಕೂ ಹೆಚ್ಚು ಜನರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ರತಿ ರಾಮಪುರ ಟೋಲ್ ಪ್ಲಾಜಾದಲ್ಲಿ ಸೋಮವಾರ (ಜನವರಿ 27)ಈ ಘಟನೆ ನಡೆದಿದ್ದು, ಪ್ರೇಕ್ಷಕರೊಬ್ಬರು ರಹಸ್ಯವಾಗಿ ಈ ದೃಶ್ಯವನ್ನು ರೆಕಾರ್ಡ್ ಮಾಡಿ ನಂತರ ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಈಗ ವೈರಲ್(Viral Video) ಆಗಿದೆ.
ಈ ಘಟನೆಯಲ್ಲಿ ಭಾಗಿಯಾಗಿರುವ ಐದು ವ್ಯಕ್ತಿಗಳ ವಿರುದ್ಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದಾರೆ. ಹಾಗೂ ನಾಲ್ವರು ಆರೋಪಿಗಳನ್ನು ಅದೇ ದಿನ ರಾತ್ರಿ ಅವರ ಮನೆಗಳ ಮೇಲೆ ದಾಳಿ ಮಾಡಿ ಬಂಧಿಸಲಾಗಿದ್ದು, ಆದರೆ ಐದನೇ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ಅವರ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ.
ಮಾಹಿತಿಯ ಪ್ರಕಾರ, ಮೊರೆನಾ ಜಿಲ್ಲೆಯ ರತಿ ರಾಂಪುರ್ ಟೋಲ್ ಪ್ಲಾಜಾದಲ್ಲಿ ಒಂದೇ ಕುಟುಂಬದ 12ಕ್ಕೂ ಹೆಚ್ಚು ಜನರು ಜಮಾಯಿಸಿ ಪ್ರಮುಖ ವ್ಯಕ್ತಿಯೊಬ್ಬನನ್ನು ಸ್ವಾಗತಿಸುವುದಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿಡಿಯೊದಲ್ಲಿ ಜನರ ಗುಂಪು ಕೈಯಲ್ಲಿ ಬಂದೂಕುಗಳನ್ನು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ದೃಶ್ಯ ಸೆರೆಯಾಗಿದೆ.
ಅಲ್ಲಿದ್ದ ಪ್ರೇಕ್ಷಕನೊಬ್ಬ ಈ ಘಟನೆಯನ್ನು ರೆಕಾರ್ಡ್ ಮಾಡಿ ಪೊಲೀಸರಿಗೆ ಕಳುಹಿಸಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ಐವರು ಆರೋಪಿಗಳನ್ನು ಗುರುತಿಸಿದ್ದು, ಅವರನ್ನು ಬಂಧಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರು ತಪ್ಪಿಸಿಕೊಂಡ ಕಾರಣ ಶೋಧ ಕಾರ್ಯ ಶುರುಮಾಡಿ ಐವರು ಆರೋಪಿಗಳಲ್ಲಿ ನಾಲ್ವರನ್ನು ಅದೇ ದಿನ ರಾತ್ರಿ ಅವರ ಮನೆಯ ಮೇಲೆ ದಾಳಿ ಮಾಡಿ ಬಂಧಿಸಲಾಯಿತು.
ಈ ಸುದ್ದಿಯನ್ನೂ ಓದಿ:Viral Video: ಹಾಲಿ-ಮಾಜಿ ಶಾಸಕರ ನಡುವೆ ಮಾರಾಮಾರಿ- ಗುಂಡಿನ ದಾಳಿ; ವಿಡಿಯೊ ವೈರಲ್
ಐದನೇ ಆರೋಪಿ ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಡಿದ್ದಾರೆ. ಇದಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ರಾಜೌರಿಯಾ ಕುಟುಂಬವು ಹೊಂದಿರುವ ಟೋಲ್ ಪ್ಲಾಜಾ ಒಪ್ಪಂದವನ್ನು ರದ್ದುಗೊಳಿಸಲು ಶಿಫಾರಸು ಮಾಡಿ ಜಿಲ್ಲಾಧಿಕಾರಿಗೆ ಪತ್ರ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಮೀರ್ ಸೌರಭ್ ಮಾಹಿತಿ ನೀಡಿದ್ದಾರೆ.