ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Virat Kohli: ಬೌಂಡರಿಗಳ ಮೂಲಕವೇ ದಾಖಲೆ ಬರೆದ ವಿರಾಟ್‌ ಕೊಹ್ಲಿ

IPL 2025: ಮಾಜಿ ಕ್ರಿಕೆಟಿಗ ಶಿಖರ್ ಧವನ್ 920 ಬೌಂಡರಿಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ 899 ಬೌಂಡರಿ ಬಾರಿಸಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 22 ರನ್‌ ಬಾರಿಸಿದ್ದರು.

ಬೌಂಡರಿಗಳ ಮೂಲಕವೇ ದಾಖಲೆ ಬರೆದ ವಿರಾಟ್‌ ಕೊಹ್ಲಿ

Profile Abhilash BC Apr 11, 2025 9:50 AM

ಬೆಂಗಳೂರು: ದಾಖಲೆಗಳ ಸರದಾರ ವಿರಾಟ್‌ ಕೊಹ್ಲಿ(Virat Kohli) ಅವರು ಬೌಂಡರಿಗಳ ಮೂಲಕವೇ ದಾಖಲೆಯೊಂದನ್ನು ಬರೆದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌(Delhi Capitals) ವಿರುದ್ಧದ ಪಂದ್ಯದಲ್ಲಿ ಒಂದು ಬೌಂಡರಿ ಮತ್ತು ಸಿಕ್ಸರ್‌ ಬಾರಿಸುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಇತಿಹಾಸದಲ್ಲಿ 1000 ಬೌಂಡರಿಗಳನ್ನು (ಫೋರ್ಸ್‌ + ಸಿಕ್ಸ್‌ ಸೇರಿಸಿ) ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾದರು.

36 ವರ್ಷದ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಈ ದಾಖಲೆಯನ್ನು ಸ್ಥಾಪಿಸಲು ಕೇವಲ ಎರಡು ಬೌಂಡರಿಗಳು ಬೇಕಾಗಿದ್ದವು. ಮಾಜಿ ಕ್ರಿಕೆಟಿಗ ಶಿಖರ್ ಧವನ್ 920 ಬೌಂಡರಿಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿರುವ ಡೇವಿಡ್ ವಾರ್ನರ್ 899 ಬೌಂಡರಿ ಬಾರಿಸಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 22 ರನ್‌ ಬಾರಿಸಿದ್ದರು.

ಇದೇ ಪಂದ್ಯದಲ್ಲಿ ಭುವನೇಶ್ವರ್‌ ಕುಮಾರ್‌(Bhuvneshwar Kumar) ಎರಡು ವಿಕೆಟ್‌ ಕೀಳುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆರ್‌.ಅಶ್ವಿನ್‌ ಅವರ ಐಪಿಎಲ್‌ ದಾಖಲೆಯೊಂದನ್ನು ಮುರಿದರು. 2 ವಿಕೆಟ್‌ ಕಿತ್ತ ಭುವನೇಶ್ವರ್‌(186 ವಿಕೆಟ್‌), ಐಪಿಎಲ್‌ನಲ್ಲಿ ಅತ್ಯಧಿಕ ವಿಕೆಟ್‌ ಕಿತ್ತ ಮೂರನೇ ಬೌಲರ್‌ ಎನಿಸಿಕೊಂಡರು.

ಐಪಿಎಲ್‌ನಲ್ಲಿ ಅತ್ಯಧಿಕ ವಿಕೆಟ್‌ ಕಿತ್ತ ದಾಖಲೆ ಯುಜವೇಂದ್ರ ಚಹಲ್‌ ಹೆಸರಿನಲ್ಲಿದೆ. ಚಹಲ್‌ 206 ವಿಕೆಟ್‌ ಕಿತ್ತಿದ್ದಾರೆ. 192 ವಿಕೆಟ್‌ ಕಿತ್ತಿರುವ ಪಿಯೂಷ್ ಚಾವ್ಲಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಭುವನೇಶ್ವರ್‌ ಅವರಿಗೆ ಚಾವ್ಲಾ ದಾಖಲೆ ಮುರಿಯಲು ಇನ್ನು 6 ವಿಕೆಟ್‌ ಅಗತ್ಯವಿದೆ. 185 ವಿಕೆಟ್‌ ಕಿತ್ತಿರುವ ಆರ್‌.ಅಶ್ವಿನ್‌ ನಾಲ್ಕನೇ ಸ್ಥಾನಿಯಾಗಿದ್ದಾರೆ. ಇಂದು ನಡೆಯುವ ಕೋಲ್ಕತಾ ವಿರುದ್ಧದ ಪಂದ್ಯದಲ್ಲಿ ಅಶ್ವಿನ್‌ 2 ವಿಕೆಟ್‌ ಕಿತ್ತರೆ ಭುವನೇಶ್ವರ್‌ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಲಿದ್ದಾರೆ.

ಇದನ್ನೂ ಓದಿ IPL 2025 Points Table: ಗೆದ್ದರೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ವಿಫಲವಾದ ಡೆಲ್ಲಿ

ಚಿನ್ನಸ್ವಾಮಿ ಮೈದಾನದಲ್ಲಿ ಗುರುವಾರ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿ ತಂಡ ಡೆಲ್ಲಿ ವಿರುದ್ಧ 6 ವಿಕೆಟ್‌ ಅಂತರದ ಸೋಲು ಕಂಡು ತವರಿನಲ್ಲಿ ಸತತ ಎರಡನೇ ಸೋಲು ಕಂಡ ಅವಮಾನ ಎದುರಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ಉತ್ತಮ ಆರಂಭದ ಬಳಿಕ ನಾಟಕೀಯ ಕುಸಿತ ಕಂಡು 7 ವಿಕೆಟ್‌ಗೆ 163 ರನ್‌ ಬಾರಿಸಿತು. ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ರಾಹುಲ್‌ ಅವರ ಅಜೇಯ ಅರ್ಧಶತಕದ ನೆರವಿನಿಂದ 17.5 ಓವರ್‌ಗಳಲ್ಲಿ 4 ವಿಕೆಟ್‌ಗೆ 169 ರನ್‌ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.