ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Election Commission: ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್: ಇವರ ಹಿನ್ನೆಲೆಯೇನು?

ಚುನಾವಣಾ ಆಯುಕ್ತರಾಗಿದ್ದ ರಾಜೀವ್‌ ಕುಮಾರ್‌ ಅವರ ಅಧಿಕಾರವಧಿ ಮುಗಿದಿದ್ದು,ಅವರು ನಿವೃತ್ತರಾಗಿದ್ದಾರೆ. ಇದೀಗ ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಆಯ್ಕೆಯಾಗಿದ್ದು, ಸದ್ಯದಲ್ಲೇ ಅಧಿಕಾರವಹಿಸಿಕೊಳ್ಳಲಿದ್ದಾರೆ. ಜ್ಞಾನೇಶ್‌ ಕುಮಾರ್‌ ಅವರ ಹಿನ್ನೆಲೆಯನ್ನು ಇಲ್ಲಿ ವಿವರಿಸಲಾಗಿದೆ. ಆದರೆ ಅವರ ನಾಮ ನಿರ್ದೇಶನವನ್ನು ಅನುಮೋದಿಸಲಾಗಿಲ್ಲ.

ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್?

ಹೊಸ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್

Profile Deekshith Nair Feb 17, 2025 9:46 PM

ನವದೆಹಲಿ: ಕಳೆದ ಎರಡು ವರ್ಷಗಳಿಂದ ಮುಖ್ಯ ಚುನಾವಣಾ ಆಯುಕ್ತರಾಗಿ(Election Commissioner) ಸೇವೆ ಸಲ್ಲಿಸಿದ್ದ ರಾಜೀವ್‌ ಕುಮಾರ್‌(Rajeev Kumar) ಅವರ ಅಧಿಕಾರವಧಿ ಮುಗಿದಿದ್ದು,ಇದೀಗ ನಿವೃತ್ತರಾಗಿದ್ದಾರೆ. ಆ ಹುದ್ದೆಗೆ ಜ್ಞಾನೇಶ್‌ ಕುಮಾರ್‌ ಅವರ ಹೆಸರು ಮುಂಚೂಣಿಯಲ್ಲಿದ್ದು, ಆಯ್ಕೆಯಾಗಿದ್ದು, ಸದ್ಯದಲ್ಲೇ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ ಚುನಾವಣಾ ಆಯೋಗದ(Election Commission) ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಕೊನೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದ್ದು ಅದರ ಮೇಲುಸ್ತಾವರಿಯನ್ನು ಜ್ಞಾನೇಶ್‌ ಕುಮಾರ್‌ ನೋಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇನ್ನು ಮುಂದಿನ ವರ್ಷ ಪಶ್ಚಿಮ ಬಂಗಾಳ,ಅಸ್ಸಾಂ ಮತ್ತು ತಮಿಳುನಾಡಿನಲ್ಲಿ ನಡೆಯಲಿರುವ ಚುನಾವಣೆಯ ಜವಾಬ್ದಾರಿಯನ್ನೂ ಅವರು ನಿಭಾಯಿಸಲಿದ್ದಾರೆ.



ಜ್ಞಾನೇಶ್‌ ಕುಮಾರ್‌ ಅವರ ಹಿನ್ನೆಲೆಯೇನು?

ಜ್ಞಾನೇಶ್ ಕುಮಾರ್ ಅವರು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್‌ನಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್ಸ್ ಆಫ್ ಇಂಡಿಯಾದಿಂದ ಬಿಸಿನೆಸ್ ಫೈನಾನ್ಸ್ ಅನ್ನು ಸಹ ಅಧ್ಯಯನ ಮಾಡಿದ್ದಾರೆ. ಹೆಚ್ಚುವರಿಯಾಗಿ, ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಪರಿಸರ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ

1988 ರ ಬ್ಯಾಚ್‌ನ ಕೇರಳ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಶ್ ಕುಮಾರ್ ರಾಜೀವ್ ಕುಮಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯಲ್ಲಿದ್ದರು. 61 ವರ್ಷದ ಜ್ಞಾನೇಶ್‌ ಅವರು ಈ ಹಿಂದೆ ಕೇಂದ್ರ ಗೃಹ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಆಗಸ್ಟ್ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮಸೂದೆಯ ಕರಡನ್ನು ರೂಪಿಸುವುದರಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.ಆಗ ಅವರು ಗೃಹ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು.

ಈ ಸುದ್ದಿಯನ್ನೂ ಓದಿ:New Delhi Stampede: ದೆಹಲಿ ಭೀಕರ ಕಾಲ್ತುಳಿತ ದುರಂತ: ಹರಿದಾಡಿದ ವಿಡಿಯೊ-ಮೋದಿ ಸೇರಿ ಹಲವು ನಾಯಕರ ಸಂತಾಪ!

ನಂತರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಬಗ್ಗೆ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿದ್ದರು. ಇನ್ನು ಜ್ಞಾನೇಶ್ ಕುಮಾರ್ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಆಪ್ತರು ಎಂದು ಮೂಲಗಳು ತಿಳಿಸಿವೆ. ಅವರು ಕಳೆದ ವರ್ಷ ಜನವರಿಯಲ್ಲಿ ನಾಗರಿಕ ಸೇವೆಯಿಂದ ನಿವೃತ್ತರಾಗಿದ್ದಾರೆ.

ಜ್ಞಾನೇಶ್‌ ಕುಮಾರ್‌ ಅವರ ನಾಮನಿರ್ದೇಶನವನ್ನು ಇನ್ನೂ ಅನುಮೋದಿಸಲಾಗಿಲ್ಲ ಎಂದು ತಿಳಿದು ಬಂದಿದೆ.