IND vs NZ: ಇಂದು ಭಾರತ ಗೆದ್ದರೆ ಅಥವಾ ಸೋತರೆ ಸೆಮಿ ಎದುರಾಳಿ ಯಾರು?
ಇಂದು ನಡೆಯುವ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದರೆ ಅಗ್ರಸ್ಥಾನಕ್ಕೇರುವ ಮೂಲಕ ಸೆಮಿಯಲ್ಲಿ ಆಸ್ಟ್ರೇಲಿಯಾದ ಸವಾಲು ಎದುರಿಸಲಿದೆ. ಸೋತರೆ, ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಬಿ ಗುಂಪಿನಲ್ಲಿ 5 ಅಂಕ ಹೊಂದಿರುವ ದಕ್ಷಿಣ ಆಫ್ರಿಕಾ ಅಗ್ರಸ್ಥಾನಿ, 4 ಅಂಕ ಗಳಿಸಿರುವ ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ.


ದುಬೈ: 2 ಬಾರಿ ಚಾಂಪಿಯನ್ ಭಾರತ ತಂಡ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ. ಮಾರ್ಚ್ 4 ರಂದು ದುಬೈನಲ್ಲಿ ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಕಣಕ್ಕಿಳಿಯಲಿದೆ. ಆದರೆ ಭಾರತದ ಎದುರಾಳಿ ಯಾರೆಂಬುದು ಇನ್ನೂ ಕೂಡ ನಿಗದಿಯಾಗಿಲ್ಲ. ಇಂದು(ಭಾನುವಾರ) ನಡೆಯುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಫಲಿತಾಂಶದ ಬಳಿಕ ಇದು ಅಧಿಕೃತಗೊಳ್ಳಿದೆ.
'ಎ' ಗುಂಪಿನಲ್ಲಿರುವ ಭಾರತ ಮತ್ತು ನ್ಯೂಜಿಲ್ಯಾಂಡ್ ಆಡಿರುವ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿ ತಲಾ 4 ಅಂಕ ಹೊಂದಿದೆ. ಆದರೆ ನೆಟ್ ರನ್ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್ (+0.863) ಅಗ್ರಸ್ಥಾನದಲ್ಲಿದ್ದರೆ, ಭಾರತ(+0.647) ನಂತರದ ಸ್ಥಾನದಲ್ಲಿದೆ. ಭಾನುವಾರದ ಮುಖಾಮುಖಿಯಲ್ಲಿ ಗೆಲ್ಲುವ ತಂಡ ಬಿ ಗುಂಪಿನ ದ್ವಿತೀಯ ಸ್ಥಾನಿಯಾಗಿರುವ ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಸೆಮಿ ಪಂದ್ಯದಲ್ಲಿ ಆಡಲಿದೆ.
ಹೌದು, ಇಂದು ನಡೆಯುವ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದರೆ ಅಗ್ರಸ್ಥಾನಕ್ಕೇರುವ ಮೂಲಕ ಸೆಮಿಯಲ್ಲಿ ಆಸ್ಟ್ರೇಲಿಯಾದ ಸವಾಲು ಎದುರಿಸಲಿದೆ. ಸೋತರೆ, ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಬಿ ಗುಂಪಿನಲ್ಲಿ 5 ಅಂಕ ಹೊಂದಿರುವ ದಕ್ಷಿಣ ಆಫ್ರಿಕಾ ಅಗ್ರಸ್ಥಾನಿ, 4 ಅಂಕ ಗಳಿಸಿರುವ ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ.
ಉಭಯ ತಂಡಗಳಿಗೂ ಹ್ಯಾಟ್ರಿಕ್ ಜಯದ ಗುರಿ
ಭಾರತ ಮತ್ತು ನ್ಯೂಜಿಲ್ಯಾಂಡ್ ಆಡಿದ ಎರಡು ಪಂದ್ಯಗಳಲ್ಲಿಯೂ ಗೆದ್ದು ಅಜೇಯವಾಗಿದೆ. ಇದೀಗ ಇತ್ತಂಡಗಳು ಹ್ಯಾಟ್ರಿಕ್ ಗೆಲುವಿನ ಹಂಬಲದಲ್ಲಿದ್ದು ಸೆಮಿಫೈನಲ್‌ಗೆ ಮುನ್ನ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಿಸುವ ಕಾತರದಲ್ಲಿದೆ. ಹೀಗಾಗಿ ಪಂದ್ಯ ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಇದೆ.
ಇದನ್ನೂ ಓದಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೇರಬಲ್ಲ ಎರಡು ತಂಡಗಳನ್ನು ಆರಿಸಿದ ಮೈಕಲ್ ಕ್ಲಾರ್ಕ್!
ಸಂಭಾವ್ಯ ತಂಡಗಳು
ಭಾರತ: ಶುಭಮನ್ ಗಿಲ್, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಅರ್ಶ್‌ದೀಪ್ ಸಿಂಗ್, ವರುಣ್ ಚರ್ಕವರ್ತಿ.
ನ್ಯೂಜಿಲ್ಯಾಂಡ್: ವಿಲ್ ಯಂಗ್, ಡೆವೊನ್ ಕಾನ್ವೇ, ಡೇರಿಯಲ್ ಮಿಚೆಲ್, ರಚಿನ್ ರವೀಂದ್ರ, ಟಾಮ್ ಲ್ಯಾಥಮ್ (ವಿ.ಕೀ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್‌ಮನ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕೆ.