Champions Trophy: ಸಂಜು ಬದಲಿಗೆ ಪಂತ್‌ಗೆ ಚಾನ್ಸ್ ನೀಡಲು ಕಾರಣ ತಿಳಿಸಿದ ದಿನೇಶ್ ಕಾರ್ತಿಕ್!
ಏಕದಿನ ಹಾಗೂ ಟಿ20ಐ ಸ್ವರೂಪದಲ್ಲಿ ಸಂಜು ಸ್ಯಾಮ್ಸನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಹೀಗಿದ್ದರೂ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ರಿಷಭ್ ಪಂತ್‌ಗೆ ಸ್ಥಾನ ನೀಡಿದ್ದೇಕೆಂದು ಮಾಜಿ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ದಿನೇಶ್ ಕಾರ್ತಿಕ್ ವಿವರಿಸಿದ್ದಾರೆ.

Dinesh Karthik on Sanju and Pant

ನವದೆಹಲಿ: ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರವರಿ 19 ರಿಂದ ಆರಂಭವಾಗಲಿರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ರಿಷಭ್ ಪಂತ್‌ಗೆ ಬಿಸಿಸಿಐ ಆಯ್ಕೆ ಮಂಡಳಿ ಸ್ಥಾನ ನೀಡಿದ್ದೇಕೆಂದು ಮಾಜಿ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಪಂತ್‌ಗಿಂತ ಸ್ಯಾಮ್ಸನ್ ಇತ್ತೀಚೆಗೆ ಉತ್ತಮ ಫಾರ್ಮ್ ನಲ್ಲಿದ್ದು ಅವರಿಗೇ ಅವಕಾಶ ನೀಡಬೇಕಿತ್ತು ಎಂದು ಹಲವು ಮಾಜಿ ಕ್ರಿಕೆಟಿಗರು ಆಗ್ರಹಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ರಿಷಭ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಂಡದ ಸಂಯೋಜನೆ ಸರಿದೂಗಿಸುವ ಸಲುವಾಗಿ ಅವರಿಗೆ ಸ್ಥಾನ ನೀಡಲಾಗಿದೆ. ಅಲ್ಲದೆ ಸಂಜು ಸ್ಯಾಮ್ಸನ್ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಿರಲಿಲ್ಲ. ಈ ಕಾರಣದಿಂದ ಅವರು ಆಯ್ಕೆದಾರರ ಗಮನ ಸೆಳೆಯುವಲ್ಲಿ ಎಡವಿರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Ind vs Eng 2nd T20I: ದ್ವಿತೀಯ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಹವಾಮಾನ ವರದಿ ಹೀಗಿದೆ
ಈಗ ಕಾಲ ಮಿಂಚಿದೆ: ದಿನೇಶ್ ಕಾರ್ತಿಕ್
ಕ್ರಿಕ್‌ಬುಝ್ ಹಮ್ಮಿಕೊಂಡಿದ್ದ ಹಾಯ್ ಸಿಬಿ ವಿತ್ ಡಿಕೆ ಕಾರ್ಯಕ್ರಮದಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರಿಷಭ್ ಪಂತ್ ಸ್ಥಾನ ಪಡೆದಿದ್ದೇಕೆ ಎಂದು ದಿನೇಶ್ ಕಾರ್ತಿಕ್ ವಿವರಿಸಿದ್ದಾರೆ.
"ಈಗ ಕಾಲ ಮಿಂಚಿ ಹೋಗಿದೆ. ಅದರ ಬಗ್ಗೆ ಮಾತನಾಡಿದರೆ ಯಾವುದೇ ಪ್ರಯೋಜನವಿಲ್ಲ. ರಿಪಭ್ ಪಂತ್ ಅಥವಾ ಸಂಜು ಸ್ಯಾಮ್ಸನ್ ಇಬ್ಬರನ್ನೂ ನೀವು (ಜನರು) ಉತ್ತಮ ಬ್ಯಾಟ್ಸ್‌ಮನ್‌ಗಳ ದೃಷ್ಟಿಯಿಂದಲೇ ನೋಡುತ್ತೀರಿ. ಆದರೆ ರಿಷಭ್ ಪಂತ್‌ಗೆ ತಂಡದಲ್ಲಿ ಸ್ಥಾನ ನೀಡಲು ಒಂದು ಪ್ರಮುಖ ಕಾರಣವಿದೆ," ಎಂದು ಆರ್‌ಸಿಬಿ ಬ್ಯಾಟಿಂಗ್ ಕೋಚ್ ಹೇಳಿದ್ದಾರೆ.
IND vs ENG: ಜೋಸ್ ಬಟ್ಲರ್‌ರ ಸ್ಟನಿಂಗ್ ಕ್ಯಾಚ್ ಪಡೆದ ನಿತೀಶ್ ರೆಡ್ಡಿ! ವಿಡಿಯೊ
ಪಂತ್ ಆಯ್ಕೆ ಸಮರ್ಥಿಸಿದ ಡಿ.ಕೆ
"ರಿಷಭ್ ಪಂತ್ ಎಡಗೈ ಆಟಗಾರರಾಗಿದ್ದು, ಬ್ಯಾಟಿಂಗ್ ಕ್ರಮಾಂಕದಲ್ಲಿ ಭಾರೀ ಬದಲಾವಣೆ ತರುತ್ತಾರೆ. ಆದರೆ ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಸ್ಥಾನ ಪಡೆಯಲು ಪ್ರಬಲ ಪೈಪೋಟಿ ನೀಡಿದ್ದರು. ಆದರೆ ಅವರು ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಆಡಲು ನಿರಾಕರಿಸಿದ್ದರು. ಆತ ಆಯ್ಕೆ ಆಗದೆ ಇರಲು ಇದು ಕೂಡ ಪ್ರಮುಖ ಕಾರಣವಾಗಿರಬಹುದು," ಎಂದು ದಿನೇಶ್ ಕಾರ್ತಿಕ್ ತಿಳಿಸಿದ್ದಾರೆ.
ಉತ್ತಮ ಫಾರ್ಮ್ ನಲ್ಲಿರುವ ಸಂಜು
ಇತ್ತೀಚೆಗೆ ಸಂಜು ಸ್ಯಾಮ್ಸನ್ ಏಕದಿನ ಹಾಗೂ ಟಿ20ಐ ಸ್ವರೂಪದಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಕಳೆದ 6 ಚುಟುಕು ಪಂದ್ಯಗಳಿಂದ ಮೂರು ಶತಕ ಸಿಡಿಸಿ ದಾಖಲೆ ಬರೆದಿರುವ ಸಂಜು ಸ್ಯಾಮ್ಸನ್, ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಏಕದಿನ ಸರಣಿಯಲ್ಲೂ ತಮ್ಮ ಚೊಚ್ಚಲ ಶತಕ ಸಿಡಿಸಿದ್ದರು. 30 ವರ್ಷದ ಸಂಜು ಸ್ಯಾಮ್ಸನ್, 14 ಏಕದಿನ ಇನಿಂಗ್ಸ್‌ಗಳಿಂದ 99.60 ಸ್ಟ್ರೆಕ್ ರೇಟ್ ನಲ್ಲಿ ಒಂದು ಶತಕ ಹಾಗೂ ಮೂರು ಅರ್ಧಶತಕಗಳ ನೆರವಿನಿಂದ 510 ರನ್ ಗಳಿಸಿದ್ದಾರೆ.
IND vs Eng: ಟಿ20ಐ ಸರಣಿಯಲ್ಲಿ ಭಾರತಕ್ಕೆ ಕೀ ಆಟಗಾರನನ್ನು ಆರಿಸಿದ ಆಕಾಶ್ ಚೋಪ್ರಾ!
ಇನ್ನು ರಿಷಭ್ ಪಂತ್ 27 ಏಕದಿನ ಇನಿಂಗ್ಸ್‌ಗಳಿಂದ 33.50ರ ಸರಾಸರಿಯಲ್ಲಿ ಒಂದು ಶತಕ ಹಾಗೂ ಐದು ಅರ್ಧಶತಕಗಳ ನೆರವಿನಿಂದ 870 ರನ್ ಬಾರಿಸಿದ್ದಾರೆ. 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಸ್ಯಾಮ್ಸನ್ ಅವರನ್ನು ಹಿಂದಿಕ್ಕಿದ ರಿಷಭ್ ಪಂತ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು.