ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಇಂದು ಭಾರತ-ಇಂಗ್ಲೆಂಡ್‌ 3ನೇ ಟಿ20: ಎಷ್ಟು ಗಂಟೆಗೆ ಪಂದ್ಯ ಆರಂಭ?

ಪಂದ್ಯದ ಮೇಲೆ ಯಾವುದೇ ಇಬ್ಬನಿ ಅಂಶವು ಪರಿಣಾಮ ಬೀರುವುದಿಲ್ಲ ಹೀಗಾಗಿ ಆಟ ಸಂಪೂರ್ಣವಾಗಿ ಪೈಪೋಟಿಯಿಂದ ಸಾಗುವ ನಿರೀಕ್ಷೆ ಇದೆ.

IND vs ENG 3rd T20I

ರಾಜ್‌ಕೋಟ್‌: ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿ ಗೆಲ್ಲುವ ತವಕದಲ್ಲಿರುವ ಭಾರತ ತಂಡ ಇಂದು(ಮಂಗಳವಾರ) ರಾಜ್‌ಕೋಟ್‌ನಲ್ಲಿ ನಡೆಯುವ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯ ರಾತ್ರಿ 7 ಗಂಟೆಗೆ ಆರಂಭವಾಗಲಿದೆ. ಪಂದ್ಯದ ನೇರ ಪ್ರಸಾರ ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ+ಹಾಟ್‌ಸ್ಟಾರ್‌ ಲಭ್ಯವಿದೆ.

ನಾಯಕನಾದ ಬಳಿಕ ಅಬ್ಬರದ ಬ್ಯಾಟಿಂಗ್‌ ಮರೆತಿರುವ ಸೂರ್ಯಕುಮಾರ್‌ ಯಾದವ್‌ ಈ ಪಂದ್ಯದಲ್ಲಾದರೂ ಸಿಡಿಯಬಹುದೇ ಎಂದು ಕಾದು ನೋಡಬೇಕಿದೆ. 14 ತಿಂಗಳ ಬಳಿಕ ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿರುವ ಹಿರಿಯ ವೇಗಿ ಮೊಹಮ್ಮದ್‌ ಶಮಿ ಈ ಪಂದ್ಯದಲ್ಲಿಯೂ ಆಡುವುದು ಅನುಮಾನ.

ಪಿಚ್‌ ರಿಪೂರ್ಟ್‌

ರಾಜ್‌ಕೋಟ್‌ನ ನಿರಂಜನ್ ಷಾ ಸ್ಟೇಡಿಯಂ(Niranjan Shah Stadium) ಬ್ಯಾಟ್ಸ್​ಮನ್​ಗಳಿಗೆ ಹೇಳಿ ಮಾಡಿಸಿದಂತಿದೆ. ಇಲ್ಲಿನ ಬೌಂಡರಿ ಗೆರೆಗಳು ಚಿಕ್ಕದಾಗಿದ್ದು, ಉಭಯ ತಂಡಗಳಿಂದಲೂ ರನ್ ಮಳೆ ನಿರೀಕ್ಷೆ ಮಾಡಲಾಗಿದೆ. ಆದರೆ, ಬ್ಯಾಟ್ಸ್​ಮನ್​ಗಳನ್ನು ನಿಯಂತ್ರಿಸಲು ಬೌಲರ್​​ಗಳು ಹರಸಾಹಸ ಪಡಬೇಕಾಗುವುದು ಖಚಿತ. ವೇಗದ ಬೌಲರ್​​ಗಳು ಕೊಂಚ ಹಳಿ ತಪ್ಪಿದರೂ, ಸ್ಪಿನ್ನರ್​ಗಳು ಮೇಲುಗೈ ಸಾಧ್ಯತೆಯೂ ಇದೆ. ಹಾಗಾಗಿ ಉಭಯ ತಂಡಗಳು ಸ್ಪಿನ್ನರ್​​ಗಳಿಗೆ ಮಣೆ ಹಾಕುವ ನಿರೀಕ್ಷೆ ಹೆಚ್ಚಿದೆ.

ಮಳೆ ಭೀತಿ ಇಲ್ಲ

ಅಕ್ಯುವೆದರ್ ಪ್ರಕಾರ, ಜನವರಿ 28 ರಂದು ರಾಜ್‌ಕೋಟ್‌ನಲ್ಲಿ ಹವಾಮಾನವು ಸ್ಪಷ್ಟವಾಗಿರುತ್ತದೆ, ಮಳೆಯಾಗುವ ಸಾಧ್ಯತೆಯಿಲ್ಲ. ಗರಿಷ್ಠ ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ, ಆದರೆ ಕನಿಷ್ಠ ತಾಪಮಾನವು 15 ಡಿಗ್ರಿಗಳಿಗೆ ಇಳಿಯುತ್ತದೆ. ಪಂದ್ಯದ ಮೇಲೆ ಯಾವುದೇ ಇಬ್ಬನಿ ಅಂಶವು ಪರಿಣಾಮ ಬೀರುವುದಿಲ್ಲ ಹೀಗಾಗಿ ಆಟ ಸಂಪೂರ್ಣವಾಗಿ ಪೈಪೋಟಿಯಿಂದ ಸಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ Virat Kohli: 12 ವರ್ಷದ ಬಳಿಕ ರಣಜಿಯಲ್ಲಿ ವಿರಾಟ್‌ ಕೊಹ್ಲಿ ಆಟ

ಭಾರತ ಸಂಭಾವ್ಯ ತಂಡ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಮಣದೀಪ್ ಸಿಂಗ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್.

ಇಂಗ್ಲೆಂಡ್‌ ಆಡುವ ಬಳಗ

ಜೋಸ್ ಬ್ಯಾಟ್ಲರ್ (ನಾಯಕ), ಬೆನ್ ಡಕೆಟ್, ಫಿಲ್ ಸಾಲ್ಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟನ್, ಜೇಮಿ ಸ್ಮಿತ್, ಜೇಮೀ ಓವರ್‌ಟನ್, ಬ್ರೇಡನ್ ಕಾರ್ಸೆ, ಜೋಫ್ರಾ ಆರ್ಚರ್, ಮಾರ್ಕ್ ವುಡ್ ಮತ್ತು ಆದಿಲ್ ರಶೀದ್.