Prabhu Chauhan: ಮದುವೆಯಾಗುವುದಾಗಿ ನಂಬಿಸಿ ವಂಚನೆ, ಯುವತಿಯಿಂದ ಬಿಜೆಪಿ ಶಾಸಕನ ಪುತ್ರನ ಮೇಲೆ ದೂರು
Prabhu Chauhan: ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ, ಶಾಸಕ ಪಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಆರೋಪಿಸಿದ್ದು, ಈ ಸಂಬಂಧ ನ್ಯಾಯ ಒದಗಿಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

Prabhu Chauhan, cheating, ಮೋಸ, ವಂಚನೆ, ಪ್ರಭು ಚೌಹಾಣ್, ಬಿಜೆಪಿ ಶಾಸಕ, BJP MLA

ಬೆಂಗಳೂರು/ಬೀದರ್: ಯುವತಿಯೊಬ್ಬರು ಮಾಜಿ ಸಚಿವ, ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ (BJP MLA Prabhu Chauhan) ಪುತ್ರನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮೋಸ (Cheating) ಮಾಡಿದ್ದಾನೆ ಎಂದು ಸಂತ್ರಸ್ತೆ ಮಹಿಳಾ ಆಯೋಗಕ್ಕೆ (Women Commission) ದೂರು ನೀಡಿದ್ದಾರೆ. ಪ್ರತೀಕ್ ಚೌಹಾಣ್ ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ಸಂಬಂಧ ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಆರೋಪಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ್ದಾನೆಂದು ಯುವತಿ, ಶಾಸಕ ಪಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಆರೋಪಿಸಿದ್ದು, ಈ ಸಂಬಂಧ ನ್ಯಾಯ ಒದಗಿಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
2023ರ ಡಿಸೆಂಬರ್ 25ರಂದು ಪೋಷಕರು ನಿಶ್ಚಿತಾರ್ಥ ಮಾಡಿದ್ದರು. ನಿಶ್ಚಿತಾರ್ಥದ ನಂತರ ಪ್ರತೀಕ್ ಜೊತೆ ಹೊಂದಾಣಿಕೆಗಾಗಿ ಬೇರೆ ಸ್ಥಳಗಳಿಗೆ ಕಳಿಸಿ ಕೊಟ್ಟಿದ್ದರು. ಅದರಂತೆ ಪ್ರತೀಕ್ ಮಹಾರಾಷ್ಟ್ರದ ಲಾತೂರ್‌ಗೆ ಕರೆದುಕೊಂಡು ಹೋಗಿದ್ದು, ಆ ವೇಳೆ ಪ್ರತೀಕ್ ಚೌಹಾಣ್ ಒತ್ತಾಯಪೂರ್ವಕವಾಗಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಮದುವೆ ಮುಂದೂಡಿದ್ದಾರೆ. ಸಾಲದ್ದಕ್ಕೆ ಅವರ ಮನೆಗೆ ಹೋಗಿ ನನ್ನ ಪೋಷಕರು ಕೇಳಿದರೆ ಗಲಾಟೆ ಮಾಡಿದ್ದು, ನಮ್ಮ ಮನೆಯವರನ್ನು ಬಡವರು ಎಂದು ಹೀಯಾಳಿಸಿದ್ದಾನೆ. ಈ ಕುರಿತು 2025ರ ಜುಲೈ 6ರಂದು ಔರಾದ್‌ನ ಹೋಕ್ರಾಣ್ ಠಾಣೆಗೆ ದೂರು ಕೊಡಲು ಹೋಗಿದ್ದೆವು. ಆದರೆ, ಪೊಲೀಸರು ದೂರನ್ನು ಸ್ವೀಕಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರದ (Maharashtra) ಉದ್ದಗೀರ್ ಯುವತಿಯೊಂದಿಗೆ ಪ್ರಭು ಚೌಹಾಣ್ ಮಗ ಪ್ರತೀಕ್ ಚೌಹಾಣ್‌ನೊಂದಿಗೆ ನಿಶ್ಚಿತಾರ್ಥವಾಗಿದ್ದು, ಕೆಲ ದಿನಗಳಿಂದ ಮದುವೆ ಲೇಟಾದ ವಿಚಾರಕ್ಕೆ ಎರಡೂ ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು. ಘಟನೆ ವಿಕೋಪಕ್ಕೆ ತಿರುಗಿ ಸಂಬಂಧಿಕರು ಹೊಡೆದಾಡಿಕೊಂಡಿದ್ದರು. ಆ ವೇಳೆ ಶಾಸಕ ಪ್ರಭು ಚೌಹಾಣ್ ಒಬ್ಬರಿಗೆ ಕಪಾಳಕ್ಕೆ ಬಾರಿಸಿದ್ದು, ಗಲಾಟೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಅದೇ ಪ್ರಕರಣದಲ್ಲಿ ಯುವತಿ, ಪ್ರತೀಕ್ ಚೌಹಾಣ್ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: Byrathi Basavaraj: ರೌಡಿಶೀಟರ್ ಹತ್ಯೆ, ಶಾಸಕ ಬೈರತಿ ಬಸವರಾಜ್‌ಗೆ ಪೊಲೀಸ್ ನೋಟಿಸ್, ಐವರ ಬಂಧನ