Bengaluru: ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ, ನೆರವಾದ ರೈಲ್ವೆ ಸಿಬ್ಬಂದಿ
Viral News: 23 ವರ್ಷದ ಅರ್ಚನಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಆರ್‌ಪಿಎಫ್ ಕಾನ್‌ಸ್ಟೆಬಲ್ ಅಮೃತ ಎಂಬವರು ಘಟನೆ ವೇಳೆ ಯಾವುದೇ ಅಪಾಯವಿಲ್ಲದೆ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ನೆರವಾದರು.


ಬೆಂಗಳೂರು: ನಗರದ (Bengaluru) ಬೈಯಪ್ಪನಹಳ್ಳಿಯ ರೈಲ್ವೆ ನಿಲ್ದಾಣದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (Sir M Visvesvaraya Terminal) ಪ್ಲಾಟ್‌ಫಾರ್ಮ್‌ನಲ್ಲಿ ಮಂಗಳವಾರ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ (birth) ನೀಡಿದ ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ. ರೈಲಿಗಾಗಿ ಕಾಯುತ್ತಿದ್ದ ಒಬ್ಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಸಕಾಲಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಗದ ಕಾರಣ ರೈಲ್ವೆ ಮಹಿಳಾ ಸಿಬ್ಬಂದಿ ಮತ್ತು ಇತರೆ ಪ್ರಯಾಣಿಕರ ನೆರವಿನೊಂದಿಗೆ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
23 ವರ್ಷದ ಅರ್ಚನಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಆರ್‌ಪಿಎಫ್ ಕಾನ್‌ಸ್ಟೆಬಲ್ ಅಮೃತ ಎಂಬವರು ಘಟನೆ ವೇಳೆ ಸ್ಥಳದಲ್ಲಿದ್ದು, ತ್ವರಿತ ಮತ್ತು ಯಾವುದೇ ಅಪಾಯವಿಲ್ಲದೆ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ನೆರವಾದರು.
ಡಿಆರ್ಎಂ ಬೆಂಗಳೂರು ಟ್ವೀಟ್
A pregnant passenger gave birth to a healthy baby boy today at SMVT Bengaluru station. Woman staff and fellow passengers extended timely support. She was later shifted to a hospital for further care. Indian Railways remains committed to passenger well-being. pic.twitter.com/oomkHQPfRi
— DRM Bengaluru (@drmsbc) July 29, 2025
ಈ ಬಗ್ಗೆ ನೈರುತ್ಯ ರೈಲ್ವೆಯ ಬೆಂಗಳೂರಿನ ವಿಭಾಗೀಯ ರೈಲ್ವೆ ಟ್ವೀಟ್ ಮಾಡಿದ್ದು, ‘ಬೆಂಗಳೂರು ಎಸ್‌ಎಂವಿಟಿ ನಿಲ್ದಾಣದಲ್ಲಿ ಮಂಗಳವಾರದಂದು ಗರ್ಭಿಣಿ ಪ್ರಯಾಣಿಕರೊಬ್ಬರು ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳಾ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರು ಸಕಾಲಕ್ಕೆ ನೆರವಾದರು. ನಂತರ ಹೆಚ್ಚಿನ ಆರೈಕೆಗಾಗಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭಾರತೀಯ ರೈಲ್ವೆ ಪ್ರಯಾಣಿಕರ ಯೋಗಕ್ಷೇಮಕ್ಕೆ ಬದ್ಧವಾಗಿದೆ’ ಎಂದು ತಿಳಿಸಿದೆ.
ಅರ್ಚನಾ ಕುಮಾರಿ ಅವರು ರೈಲು ಸಂಖ್ಯೆ 12836 ಎಸ್‌ಎಂವಿಟಿ ಬೆಂಗಳೂರು ಟು ಹಟಿಯಾ ಎಕ್ಸ್‌ಪ್ರೆಸ್‌ನಲ್ಲಿ ಹಟಿಯಾಗೆ ತೆರಳುವವರಿದ್ದರು. ಈ ವೇಳೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಇತ್ತ ಕರ್ತವ್ಯದಲ್ಲಿದ್ದ ಆರ್‌ವಿ ಸುರೇಶ್ ಬಾಬು ಎಂಬವರು ತಕ್ಷಣ ವೈದ್ಯಕೀಯ ಸಹಾಯಕ್ಕಾಗಿ ಮಾಹಿತಿ ನೀಡಿದ್ದರು. ಹೆರಿಗೆಯ ನಂತರ, ತಾಯಿ ಮತ್ತು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿವಿ ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಕಾಲಿಕ ನೆರವಿಗೆ ಅರ್ಚನಾ ಕುಮಾರಿ ಅವರ ಪತಿ ನಿಶಾಂಕ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: Noel Robinson: ಕೇರಳದ ಮುಂಡು ಧರಿಸಿ ನೃತ್ಯ ಮಾಡುತ್ತಿದ್ದ ಜರ್ಮನ್ ಟಿಕ್‌ಟಾಕರ್ ಅರೆಸ್ಟ್: ಇಲ್ಲಿದೆ ವೈರಲ್ ವಿಡಿಯೊ