ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Haryana Horror: ಸೂಟ್‌ಕೇಸ್‌ನಲ್ಲಿ ಯುವತಿ ಶವ ಪತ್ತೆ; ಪಕ್ಷದ ಕಾರ್ಯಕರ್ತೆ ಎಂದ ಕಾಂಗ್ರೆಸ್‌

ಹರ್ಯಾಣದಲ್ಲಿ ಯುವತಿಯ ಶವವೊಂದು ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಮೃತ ಯುವತಿಯನ್ನು ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಎಂದು ಗುರುತಿಸಲಾಗಿದ್ದು, ಈಕೆ ಕಾಂಗ್ರೆಸ್‌ ಜೊತೆ ನಿಕಟ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಇದೀಗ ಈಕೆ ಶವವಾಗಿ ಪತ್ತೆಯಾಗಿದ್ದು, ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

Profile Rakshita Karkera Mar 2, 2025 10:19 AM

ರೋಹ್ಟಕ್: ಅಪರಿಚಿತ ಯುವತಿಯ ಶವ ಸೂಟ್‍ಕೇಸ್‌ನಲ್ಲಿ ಪತ್ತೆಯಾಗಿರುವ ಘಟನೆ ಹರಿಯಾಣದ ರೋಹ್ಟಕ್‌ನಲ್ಲಿ ನಡೆದಿದೆ(Haryana Horror). ಇನ್ನು ಮೃತ ಯುವತಿ ಕಾಂಗ್ರೆಸ್‌ ಕಾರ್ಯಕರ್ತೆಯಾಗಿದ್ದು, ಈಕೆಯ ಶವ ನಿಗೂಢ ರೀತಿಯಲ್ಲಿ ಶುಕ್ರವಾರ ಸಂಪ್ಲಾ ಬಸ್ ನಿಲ್ದಾಣದ ಬಳಿ ದೊಡ್ಡ ನೀಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ವಿಧಿವಿಜ್ಞಾನ ತಂಡ ಘಟನಾ ಸ್ಥಳಕ್ಕೆ ತಲುಪಿದ್ದು, ತನಿಖೆಯ ನಂತರ, ಸಂತ್ರಸ್ತೆಯ ವಯಸ್ಸು 20 ರಿಂದ 22 ವರ್ಷಗಳು ಎಂದು ತಿಳಿದುಬಂದಿದ್ದು, ಆಕೆಯ ಕುತ್ತಿಗೆಗೆ ಸ್ಕಾರ್ಫ್ ಸುತ್ತಿಕೊಂಡು ಕೈಗಳಲ್ಲಿ ಮೆಹೆಂದಿ ಇತ್ತು ಎಂದು ವರದಿಯಿಂದ ತಿಳಿದುಬಂದಿದೆ.

ಸಂಪ್ಲಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಬಿಜೇಂದ್ರ ಸಿಂಗ್ ಮಾತನಾಡಿ, ಯುವತಿಯನ್ನು ಕೊಲೆ ಮಾಡಿ ಶವವನ್ನು ರಸ್ತೆಗೆ ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಹೆದ್ದಾರಿಯ ಬದಿಯಲ್ಲಿ ಸೂಟ್‌ಕೇಸ್‌ನಲ್ಲಿ ಮೃತ ದೇಹ ಪತ್ತೆಯಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆಕೆಗೆ 20 ರಿಂದ 22 ವರ್ಷ ವಯಸ್ಸಾಗಿದ್ದು, ಶವ ಇದೀಗ ಪತ್ತೆಯಾಗಿದೆ, ಅದನ್ನು ಗುರುತಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ಹೇಳಿದರು.



ಕಾಂಗ್ರೆಸ್ ಶಾಸಕ ಭರತ್ ಭೂಷಣ್ ಬಾತ್ರಾ ಪ್ರತಿಕ್ರಿಯಿಸಿ, ಮೃತ ಯುವತಿಯನ್ನು ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಎಂದು ಗುರುತಿಸಿದ್ದಾರೆ. ಆಕೆ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಇದ್ದರು. ಚುನಾವಣಾ ಪ್ರಚಾರದ ಸಮಯದಲ್ಲಿ ನರ್ವಾಲ್ ಭೂಪಿಂದರ್ ಹೂಡಾ ಮತ್ತು ದೀಪಿಂದರ್ ಹೂಡಾ ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಪಕ್ಷದ ಚಟುವಟಿಕೆಯಲ್ಲಿ ಸಾಕಷ್ಟು ಸಕ್ರಿಯರಾಗಿದ್ದರು ಎಂದು ಹೇಳಿದರು.

ಕಾಂಗ್ರೆಸ್ ಹರಿಯಾಣ ಅಧ್ಯಕ್ಷ ಭೂಪಿಂದರ್ ಸಿಂಗ್ ಹೂಡಾ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ, ಇದು "ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲಿನ ಕಪ್ಪು ಚುಕ್ಕೆ" ಎಂದು ಕರೆದಿದ್ದಾರೆ. ಘಟನೆಯ ಬಗ್ಗೆ ಉನ್ನತ ಮಟ್ಟದ ಮತ್ತುನಿಷ್ಪಕ್ಷಪಾತ ತನಿಖೆಗೆ ಅವರು ಒತ್ತಾಯಿಸಿದ್ದಾರೆ. ರೋಹ್ಟಕ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಬರ್ಬರ ಹತ್ಯೆಯ ಸುದ್ದಿ ಅತ್ಯಂತ ದುಃಖಕರ ಮತ್ತು ಆಘಾತಕಾರಿಯಾಗಿದೆ. ಅಗಲಿದ ಆತ್ಮಕ್ಕೆ ನಾನು ಗೌರವ ಸಲ್ಲಿಸುತ್ತೇನೆ ಮತ್ತು ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಈ ರೀತಿಯಾಗಿ ಬಾಲಕಿಯ ಹತ್ಯೆ ಮತ್ತು ಸೂಟ್‌ಕೇಸ್‌ನಲ್ಲಿ ಆಕೆಯ ಶವ ಪತ್ತೆಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಒಂದು ಕಪ್ಪು ಚುಕ್ಕೆಯಾಗಿದೆ" ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಕೊಲೆಯ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಮತ್ತು ಸರ್ಕಾರವು ಸಂತ್ರಸ್ತೆ ಕುಟುಂಬಕ್ಕೆ ಸಾಧ್ಯವಾದಷ್ಟು ಬೇಗ ನ್ಯಾಯ ಒದಗಿಸಬೇಕು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಅವರು ಹೇಳಿದರು.