ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Bengaluru News: ಫೆ. 20ರಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಮ್ಮಿಲನ ಸಮಾವೇಶ, ಕಾರ್ಯಾಗಾರ; ಸಾಂದರ್ಭಿಕ ರಜೆ ಮಂಜೂರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಫೆ. 20ರಂದು ಬೆಳಗ್ಗೆ ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಸಮ್ಮಿಲನ ಸಮಾವೇಶ, ಕಾರ್ಯಾಗಾರ ಮತ್ತು ಉಪನ್ಯಾಸವನ್ನು ಆಯೋಜಿಸಿದೆ. ಜತೆಗೆ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು ಮತ್ತು ಪದಾಧಿಕಾರಿಗಳಿಗೆ 1 ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

ಫೆ. 20ರಂದು ಸರ್ಕಾರಿ ನೌಕರರ ಸಂಘದಿಂದ ಕಾರ್ಯಾಗಾರ; ರಜೆ ಮಂಜೂರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

Profile Ramesh B Feb 18, 2025 8:19 PM

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಫೆ. 20ರಂದು ಬೆಳಗ್ಗೆ ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಸಮ್ಮಿಲನ ಸಮಾವೇಶ, ಕಾರ್ಯಾಗಾರ ಮತ್ತು ಉಪನ್ಯಾಸವನ್ನು ಆಯೋಜಿಸಿದೆ (Bengaluru News). ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು ಮತ್ತು ಪದಾಧಿಕಾರಿಗಳಿಗೆ ಫೆ. 20ರಂದು 1 ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼʼ2024-29ನೇ ಅವಧಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು ಹಾಗೂ ಪದಾಧಿಕಾರಿಗಳು ಪೂರ್ವಾನುಮತಿಯನ್ನು ಪಡೆಯಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದುʼʼ ಎಂದು ವಿಮಲಾಕ್ಷಿ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರಿಂದ ಚಾಲನೆ

ಫೆ. 20ರ ಬೆಳಗ್ಗೆ 11.45ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಒಟ್ಟು 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಕಾರ್ಯಾಗಾರದ ವಿವರ

ಬೆಳಗ್ಗೆ 10 ಗಂಟೆಗೆ ʼಆಡಳಿತದಲ್ಲಿ ದಕ್ಷತೆ-ಪಾರದರ್ಶಕತೆ-ಪ್ರಾಮಾಣಿಕತೆʼ ವಿಷಯ ಕುರಿತು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಉಪನ್ಯಾಸ ನೀಡಲಿದ್ದಾರೆ.

ʼಸಾರ್ವಜನಿಕ ಸೇವೆಯಲ್ಲಿ ನೌಕರರ ಪಾತ್ರ ʼ ವಿಷಯ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಉಪನ್ಯಾಸ ನೀಡಲಿದ್ದಾರೆ. ಇನ್ನು ʼಮಾಹಿತಿ ಹಕ್ಕು ಅಧಿನಿಯಮ (2005) ಸವಾಲುಗಳು-ಪರಿಹಾರಗಳುʼ ವಿಷಯವಾಗಿ ರಾಜ್ಯ ಮಾಹಿತಿ ಆಯೋಗ, ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಧಾಕಪ್ಪ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.