ಇಂದು ಆರ್‌ಸಿಬಿಗೆ ಮುಂಬೈ ಸವಾಲು; ಮೆಟ್ರೋ ಸೇವೆ ವಿಸ್ತರಣೆ
ನಾಯಕಿ ಮಂಧಾನ, ರಿಚಾ ಘೋಷ್, ಎಲ್ಲಿಸ್ ಪೆರ್ರಿ ಪ್ರಚಂಡ ಬ್ಯಾಟಿಂಗ್ ಫಾರ್ಮ್‌ನಲಿದ್ದಾರೆ. ಬೌಲಿಂಗ್‌ನಲ್ಲಿ ರೇಣುಕಾ ಸಿಂಗ್ ಕೂಡ ಉತ್ತಮ ಲಯದಲ್ಲಿದ್ದಾರೆ. ಅತ್ತ ಮುಂಬೈ ಇಂಡಿಯನ್ಸ್ ಕೂಡ ಬಲಿಷ್ಠವಾಗಿದೆ. ನ್ಯಾಟ್ ಸ್ಕಿವರ್ ಬ್ರಂಟ್, ಹ್ಯಾಲಿ ಮ್ಯಾಥ್ಯೂಸ್ ಸಿಡಿದು ನಿಂತರೆ ದೊಡ್ಡ ಮೊತ್ತಕ್ಕೇನು ಕೊರತೆಯಿಲ್ಲ. ಹೀಗಾಗಿ ಪಂದ್ಯ ತೀವ್ರ ಪೈಪೋಟಿಯಿಂದ ಕೂಡಿರುವ ನಿರೀಕ್ಷೆ ಇದೆ.


ಬೆಂಗಳೂರು: ಒಂದು ದಿನದ ವಿಶ್ರಾಂತಿ ಬಳಿಕ ಮತ್ತೆ ಮಹಿಳಾ ಪ್ರೀಮಿಯರ್ ಲೀಗ್(WPL 2025) ಪಂದ್ಯಾವಳಿಗೆ ಇಂದು ಚಾಲನೆ ಸಿಗಲಿದೆ. ಉದ್ಯಾನನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ ಬೆಂಗಳೂರು(RCB vs MI) ಮತ್ತು ಸ್ಟಾರ್ ಆಟಗಾರರನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಸತತ ಎರಡು ಪಂದ್ಯಗಳನ್ನು ಗೆದ್ದಿರುವ ಸ್ಮೃತಿ ಮಂಧಾನ ಪಡೆ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ. ಬೆಂಗಳೂರಿನಲ್ಲಿ ಒಟ್ಟು 8 ಪಂದ್ಯಗಳು ನಿಗದಿಯಾಗಿದ್ದು ಆರ್‌ಸಿಬಿ 4ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಚಿನ್ನಸ್ವಾಮಿಯಲ್ಲಿ ಈ ಋತುವಿನ ಮೊದಲ ಪಂದ್ಯ ವನ್ನಾಡಲಿರುವ ಆರ್‌ಸಿಬಿಗೆ ಅಭಿಮಾನಿಗಳು ಭಾರೀ ಸ್ವಾಗತ ನೀಡುವ ಸಾಧ್ಯತೆಯಿದೆ. ಹೀಗಾಗಿ ತಂಡದ ಆಟಗಾರ್ತಿಯರು ವಡೋದರದಲ್ಲಿ ನೀಡಿದ ಪ್ರದರ್ಶನನ್ನೇ ತವರಿನಲ್ಲಿಯೂ ಮುಂದುವರಿಸುವ ಆತ್ಮವಿಶ್ವಾಸದಲ್ಲಿದೆ.
ನಾಯಕಿ ಮಂಧಾನ, ರಿಚಾ ಘೋಷ್, ಎಲ್ಲಿಸ್ ಪೆರ್ರಿ ಪ್ರಚಂಡ ಬ್ಯಾಟಿಂಗ್ ಫಾರ್ಮ್‌ನಲಿದ್ದಾರೆ. ಬೌಲಿಂಗ್‌ನಲ್ಲಿ ರೇಣುಕಾ ಸಿಂಗ್ ಕೂಡ ಉತ್ತಮ ಲಯದಲ್ಲಿದ್ದಾರೆ. ಅತ್ತ ಮುಂಬೈ ಇಂಡಿಯನ್ಸ್ ಕೂಡ ಬಲಿಷ್ಠವಾಗಿದೆ. ನ್ಯಾಟ್ ಸ್ಕಿವರ್ ಬ್ರಂಟ್, ಹೀಲಿ ಮ್ಯಾಥ್ಯೂಸ್ ಸಿಡಿದು ನಿಂತರೆ ದೊಡ್ಡ ಮೊತ್ತಕ್ಕೇನು ಕೊರತೆಯಿಲ್ಲ. ಹೀಗಾಗಿ ಪಂದ್ಯ ತೀವ್ರ ಪೈಪೋಟಿಯಿಂದ ಕೂಡಿರುವ ನಿರೀಕ್ಷೆ ಇದೆ.
We’re here in Namma Bengaluru, and we’re Game Ready! 😎🏡
— Royal Challengers Bengaluru (@RCBTweets) February 21, 2025
Are you ready to bring in the heat to the opposition at Namma Chinnaswamy? 🥵
This is #RCBvMI preview on @bigbasket_com presents Game Day. 🎥
Also, don’t forget to check out Big Basket for all your essentials,… pic.twitter.com/phZFhvlqpe
ಮೆಟ್ರೋ ಸೇವೆ ವಿಸ್ತರಣೆ
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ. (ಬಿಎಂಆರ್‌ಸಿಎಲ್) ಮಹಿಳೆಯರ ಪ್ರೀಮಿಯರ್ ಲೀಗ್ (WPL) ಕ್ರಿಕೆಟ್ 2025 - ಬೆಂಗಳೂರು ಪಂದ್ಯಗಳಿಗೆ ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮಹಿಳೆಯರ ಕ್ರಿಕೆಟ್ ಪಂದ್ಯಗಳು ನಡೆಯುವ ದಿನ ರಾತ್ರಿ ವೇಳೆ ಕೊನೆಯದಾಗಿ ಹೊರಡುವ ಮೆಟ್ರೋ ರೈಲು 11.20ಕ್ಕೆ ಹೊರಟು 11.55ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೂ ಮೆಟ್ರೋ ರೈಲು ಹೊರಡಿಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ನೇರಳೆ ಮತ್ತು ಹಸಿರು ಮಾರ್ಗಗಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಾದ ಚಲ್ಲಘಟ್ಟ, ವೈಟ್‌ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು ಸೇವೆ ರಾತ್ರಿ 11.20 ರವರೆಗೆ ಮತ್ತು ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡುತ್ತವೆ. ಪ್ರಯಾಣಿಕರು ಮೆಟ್ರೋ ಪ್ರಯಾಣಕ್ಕಾಗಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ ಗಳು (ಎನ್‌ಸಿಎಂಸಿ) ಮತ್ತು ಟೋಕನ್‌ಗಳನ್ನು ಬಳಸಿ ಪ್ರಯಾಣಿಸಬಹುದು.
ಇದನ್ನೂ ಓದಿ WPL 2025: ನ್ಯಾಟ್ ಸಿವರ್ ಬ್ರಂಟ್ ಆಲ್‌ರೌಂಡ್ ಆಟದ ಬಲದಿಂದ ಗೆದ್ದ ಮುಂಬೈ ಇಂಡಿಯನ್ಸ್!
ಸಂಭಾವ್ಯ ತಂಡಗಳು
ಆರ್‌ಸಿಬಿ: ಸ್ಮೃತಿ ಮಂಧಾನ (ನಾಯಕಿ), ಡೇನಿಯಲ್ ವ್ಯಾಟ್-ಹಾಡ್ಜ್, ಎಲ್ಲಿಸ್ ಪೆರ್ರಿ, ರಾಘ್ವಿ ಬಿಸ್ಟ್, ರಿಚಾ ಘೋಷ್ (ವಿ.ಕೀ.), ಕನಿಕಾ ಅಹುಜಾ, ಜಾರ್ಜಿಯಾ ವಾರೆಹಮ್, ಕಿಮ್ ಗಾರ್ತ್, ಏಕ್ತಾ ಬಿಶ್ತ್, ಜೋಶಿತಾ ವಿಜೆ, ರೇಣುಕಾ ಠಾಕೂರ್ ಸಿಂಗ್.
ಮುಂಬೈ: ಯಾಸ್ತಿಕಾ ಭಾಟಿಯಾ (ವಿ.ಕೀ.), ಹೀಲಿ ಮ್ಯಾಥ್ಯೂಸ್, ನ್ಯಾಟ್ ಸ್ಕಿವರ್ ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜಿ ಕಮಲಿನಿ, ಅಮೆಲಿಯಾ ಕೆರ್, ಸಜೀವನ್ ಸಜನಾ, ಅಮನ್‌ಜೋತ್ ಕೌರ್, ಸಂಸ್ಕೃತಿ ಗುಪ್ತಾ, ಶಬ್ನಿಮ್ ಇಸ್ಮಾಯಿಲ್, ಪರುಣಿಕಾ ಸಿಸೋಡಿಯಾ.