WPL 2025: ಹರ್ಮನ್‌ಪ್ರೀತ್ ಕೌರ್‌ಗೆ ದಂಡದ ಬಿಸಿ ಮುಟ್ಟಿಸಿದ ಬಿಸಿಸಿಐ
WPL 2025: 'ಹರ್ಮನ್‌ಪ್ರೀತ್ ಕೌರ್ ಪಂದ್ಯದ ಸಮಯದಲ್ಲಿ ಅಂಪೈರ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಆರ್ಟಿಕಲ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ. ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ. ಕೌರ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ' ಎಂದು ಡಬ್ಲ್ಯುಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.


ಲಕ್ನೋ: ಇಲ್ಲಿನ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಮಹಿಳಾ ಪ್ರೀಮಿಯರ್ ಲೀಗ್‌ನ(WPL 2025) ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್(Harmanpreet Kaur) ಅವರಿಗೆ ಬಿಸಿಸಿಐ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಿದೆ. ಈ ಪಂದ್ಯದಲ್ಲಿ ಮುಂಬೈ 6 ವಿಕೆಟ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ಮೂಲಕ ಪ್ಲೇ ಆಫ್ ಸನಿಹಕ್ಕೆ ಬಂದು ನಿಂತಿದೆ.
ಯುಪಿ ವಾರಿಯರ್ಸ್ ಇನಿಂಗ್ಸ್‌ನ 19ನೇ ಓವರ್‌ನ ಕೊನೆಯಲ್ಲಿ ಅಂಪೈರ್ ಅಜಿತೇಶ್ ಅರ್ಗಲ್ ನಿಧಾನಗತಿಯ ಓವರ್ ರೇಟ್‌ನಿಂದಾಗಿ ಅಂತಿಮ ಓವರ್‌ನಲ್ಲಿ ಕೇವಲ ಮೂವರು ಫೀಲ್ಡರ್‌ಗಳು ಮೈದಾನದಲ್ಲಿ ಇರಲು ಸಾಧ್ಯ ಎಂದು ಹರ್ಮನ್‌ಪ್ರೀತ್‌ಗೆ ತಿಳಿಸಿದರು. ಇದರಿಂದ ಅತೃಪ್ತರಾದ ಹರ್ಮನ್‌ಪ್ರೀತ್ ಅಂಪೈರ್ ಜತೆ ಕೆಲಕಾಲ ವಾಗ್ವಾದ ನಡೆಸಿದರು. ಅಲ್ಲದೆ ಯುಪಿ ವಾರಿಯರ್ಸ್ ತಂಡದ ಸೋಫಿ ಎಕ್ಲೆಸ್ಟೋನ್ ಅವರಿಗೂ ಬೈದರು. ಇದೀಗ ಬಿಸಿಸಿಐ ಅವರಿಗೆ ದಂಡದ ಬಿಸಿ ಮುಟ್ಟಿಸಿದೆ.
'ಹರ್ಮನ್‌ಪ್ರೀತ್ ಕೌರ್ ಪಂದ್ಯದ ಸಮಯದಲ್ಲಿ ಅಂಪೈರ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಆರ್ಟಿಕಲ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ. ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ. ಕೌರ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ' ಎಂದು ಡಬ್ಲ್ಯುಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ WPL 2025: ಕೊನೆಯ 2 ಪಂದ್ಯ ಗೆದ್ರೆ ಆರ್‌ಸಿಬಿ ಪ್ಲೇಆಫ್ಸ್‌ಗೆ ತಲುಪುತ್ತಾ? ಇಲ್ಲಿದೆ ಲೆಕ್ಕಾಚಾರ!
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಯುಪಿ ತಂಡ ಉತ್ತಮ ಆರಂಭ ಪಡೆದರೂ ಆ ಬಳಿಕ ನಾಟಕೀಯ ಕುಸಿತ ಕಂಡು 9 ವಿಕೆಟಿಗೆ 150 ರನ್ ಗಳಿಸಲಷ್ಟೇ ಶಕ್ತವಾಯಿತು. ಗುರಿ ಬೆನ್ನಟ್ಟಿದ ಮುಂಬೈ ತಂಡ ಆರಂಭಿಕ ಆಟಗಾರ್ತಿ ಹೇಲೆ ಮ್ಯಾಥ್ಯೂಸ್ ಅವರ ಉತ್ತಮ ಆಟದಿಂದಾಗಿ ತಂಡ 18.3 ಓವರ್‌ಗಳಲ್ಲಿ 4 ವಿಕೆಟಿಗೆ 153 ರನ್ ಪೇರಿಸಿ ಸುಲಭ ಗೆಲುವು ದಾಖಲಿಸಿತು.
ಮ್ಯಾಥ್ಯೂಸ್ ದ್ವಿತೀಯ ವಿಕೆಟಿಗೆ ನಟ್ ಸ್ಕಿವರ್ ಬ್ರಂಟ್ ಅವರ ಜತೆಗೂಡಿ 92 ರನ್ ಪೇರಿಸಿದ್ದರು. ಮ್ಯಾಥ್ಯೂಸ್ 46 ಎಸೆತಗಳಿಂದ 68 ರನ್ ಗಳಿಸಿ ಔಟಾದರೆ ಬ್ರಂಟ್ 37 ರನ್ ಹೊಡೆದರು.