ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

WPL 2025: ಡಬ್ಲ್ಯುಪಿಎಲ್‌ ಮುಂದಿನ ಪಂದ್ಯದಿಂದ ಹೊರಗುಳಿದ ಚಾಮರಿ ಅಟ್ಟಪಟ್ಟು

21 ವರ್ಷದ ವೊಲ್‌ ಅವರು ಉದಯೋನ್ಮುಖ ಆಟಗಾರ್ತಿಯಾಗಿದ್ದಾರೆ. ಆಸೀಸ್‌ ಪರ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಆಡಿರುವ ಜಾರ್ಜಿಯಾ, ತನ್ನ ಎರಡನೇ ಏಕದಿನ ಪಂದ್ಯದಲ್ಲೇ ಶತಕ ಬಾರಿಸಿ ಮಿಂಚಿದ್ದರು. ಇತ್ತೀಚೆಗೆ ನಡೆದ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಶಸ್ತಿ ಸಮಾರಂಭದಲ್ಲಿ ಅವರು ವರ್ಷದ ಮಹಿಳಾ ದೇಶೀಯ ಆಟಗಾರ್ತಿ ಪ್ರಶಸ್ತಿಗೂ ಪಾತ್ರರಾಗಿದ್ದರು.

ಯುಪಿ ತಂಡ ಸೇರಿದ ಆಸೀಸ್‌ನ ಯುವ ಸ್ಫೋಟಕ ಬ್ಯಾಟರ್‌ ಜಾರ್ಜಿಯಾ

Profile Abhilash BC Feb 27, 2025 1:12 PM

ಬೆಂಗಳೂರು: ರಾಷ್ಟ್ರೀಯ ತಂಡದ ಕರ್ತವ್ಯದಲ್ಲಿ ಪಾಲ್ಗೊಳ್ಳುವ ಸಲುವಾಗಿ ಶ್ರೀಲಂಕಾದ ನಾಯಕಿ ಚಾಮರಿ ಅಟ್ಟಪಟ್ಟು (Chamari Athapaththu) ಉಳಿದಿರುವ ಡಬ್ಲ್ಯುಪಿಎಲ್‌(WPL 2025) ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ. ಯುಪಿ ವಾರಿಯರ್ಸ್‌ ತಂಡದ ಆಟಗಾರ್ತಿಯಾಗಿರುವ ಅವರು ಈ ಬಾರಿಯ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯ ಆಡಿರಲಿಲ್ಲ. ಇದೀಗ ಅವರ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ಆಸ್ಟ್ರೇಲಿಯಾದ 21 ವರ್ಷದ ಬ್ಯಾಟರ್‌ ಜಾರ್ಜಿಯಾ ವೊಲ್‌ (Georgia Voll) ಅವರನ್ನು ಸೇರಿಸಿಕೊಂಡಿದೆ. ಮಾರ್ಚ್ 4 ರಿಂದ ಶ್ರೀಲಂಂಕಾ ತಂಡ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದೆ. ಸರಣಿಯಲ್ಲಿ ತಲಾ ಮೂರು ಏಕದಿನ ಮತ್ತು ಟಿ20 ಪಂದ್ಯಗಳನ್ನಾಡಲಿದೆ.

21 ವರ್ಷದ ವೊಲ್‌ ಅವರು ಉದಯೋನ್ಮುಖ ಆಟಗಾರ್ತಿಯಾಗಿದ್ದಾರೆ. ಆಸೀಸ್‌ ಪರ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಆಡಿರುವ ಜಾರ್ಜಿಯಾ, ತನ್ನ ಎರಡನೇ ಏಕದಿನ ಪಂದ್ಯದಲ್ಲೇ ಶತಕ ಬಾರಿಸಿ ಮಿಂಚಿದ್ದರು. ಇತ್ತೀಚೆಗೆ ನಡೆದ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಶಸ್ತಿ ಸಮಾರಂಭದಲ್ಲಿ ಅವರು ವರ್ಷದ ಮಹಿಳಾ ದೇಶೀಯ ಆಟಗಾರ್ತಿ ಪ್ರಶಸ್ತಿಗೂ ಪಾತ್ರರಾಗಿದ್ದರು. ಮೂರು ಟಿ20, ಮೂರು ಏಕದಿನ ಮತ್ತು ಒಂದು ಟೆಸ್ಟ್‌ ಪಂದ್ಯ ಆಡಿದ್ದಾರೆ. 30 ಲಕ್ಷ ರೂ. ಮೂಲ ಬೆಲೆಗೆ ಯುಪಿ ವಾರಿಯರ್ಸ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮಹಿಳಾ ಬಿಗ್‌ ಬ್ಯಾಶ್‌ ಲೀಗ್‌ನಲ್ಲಿನಲ್ಲಿಯೂ ಉತ್ತಮ ದಾಖಲೆ ಹೊಂದಿದ್ದಾರೆ. ಆದರೆ ಕಳೆದ ಮಿನಿ ಡಬ್ಲ್ಯುಪಿಎಲ್‌ನಲ್ಲಿ ಇವರನ್ನು ಯಾರು ಖರೀದಿ ಮಾಡಿರಲಿಲ್ಲ. ಇದೀಗ ಬದಲಿ ಆಟಗಾರ್ತಿಯಾಗಿ ಅದೃಷ್ಟ ಖುಲಾಯಿಸಿದೆ.



ಸದ್ಯ ಯುಪಿ ವಾರಿಯರ್ಸ್‌ ಈ ಬಾರಿಯ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳನ್ನು ಮಾತ್ರ ಗೆದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬುಧವಾರ ನಡೆದಿದ್ದ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಯುಪಿ ತಂಡ ಭರ್ಜರಿ ಆರಂಭದ ಬಳಿಕ ನಾಟಕೀಯ ಕುಸಿತ ಕಂಡು 9 ವಿಕೆಟ್‌ಗೆ 142 ರನ್‌ ಬಾರಿಸಿದರೆ, ಗುರಿ ಬೆನ್ನತ್ತಿದ ಮುಂಬೈ ತಂಡ 17 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ನಷ್ಟಕ್ಕೆ 143 ರನ್‌ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಚೇಸಿಂಗ್‌ ವೇಳೆ ನ್ಯಾಟ್‌ ಸ್ಕಿವರ್‌ ಬ್ರಂಟ್‌ ಬಿರುಸಿನ ಆಟವಾಡಿ ಅಜೇಯ 75 ರನ್‌ ಚಚ್ಚಿದರು. ಬೌಲಿಂಗ್‌ನಲ್ಲಿಯೂ ಮಿಂಚಿದ ಅವರು ಕೇವಲ 18 ರನ್‌ಗೆ 3 ವಿಕೆಟ್‌ ಕಿತ್ತರು. ಅವರ ಈ ಆಲ್‌ರೌಂಡರ್‌ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.