ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

IND vs ENG: ಶತಕ ಬಾರಿಸುವಂತೆ ಸೂರ್ಯಕುಮಾರ್‌ಗೆ ಮನವಿ ಮಾಡಿದ ಪುಟ್ಟ ಬಾಲಕ

ನಾಯಕನಾದ ಬಳಿಕ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಸೂರ್ಯಕುಮಾರ್‌ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದಾರೆ. ಇಂಗ್ಲೆಂಡ್‌ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಿಂದ ಗಳಿಸಿದ್ದು ಕೇವಲ 26 ರನ್‌ ಮಾತ್ರ.

IND vs ENG: ಶತಕ ಬಾರಿಸುವಂತೆ ಸೂರ್ಯಕುಮಾರ್‌ಗೆ ಮನವಿ ಮಾಡಿದ ಪುಟ್ಟ ಬಾಲಕ

Suryakumar

Profile Abhilash BC Jan 31, 2025 3:21 PM

ಪುಣೆ: ಇಂಗ್ಲೆಂಡ್‌ ವಿರುದ್ಧ ಇಂದು(ಶುಕ್ರವಾರ) ನಾಲ್ಕನೇ ಟಿ20(IND vs ENG) ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌(Suryakumar Yadav) ಶತಕ ಬಾರಿಸುವಂತೆ ಪುಟ್ಟ ಬಾಲಕ ಮನವಿ ಮಾಡಿದ್ದಾನೆ. ಈ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್‌ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ಪುಣೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಸೂರ್ಯಕುಮಾರ್‌ ಅಭಿಮಾನಿಗಳಿಗೆ ಆಟೋಗ್ರಾಫ್‌ ನೀಡಿ ಫೋಟೊ ಕ್ಲಿಕಿಸಿಕೊಂಡರು. ಈ ವೇಳೆ ಪುಟ್ಟ ಬಾಲಕ, 'ಸೂರ್ಯ ಅಂಕಲ್‌, ನೀವು ಈ ಪಂದ್ಯದಲ್ಲಿ ಶತಕ ಬಾರಿಸಿ' ಎಂದು ಮನವಿ ಮಾಡಿಕೊಂಡಿದ್ದಾನೆ.

ನಾಯಕನಾದ ಬಳಿಕ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಸೂರ್ಯಕುಮಾರ್‌ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದಾರೆ. ಇಂಗ್ಲೆಂಡ್‌ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಿಂದ ಗಳಿಸಿದ್ದು ಕೇವಲ 26 ರನ್‌ ಮಾತ್ರ. ಹೀಗಾಗಿ ಅವರು ಈ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರಲೇ ಬೇಕಿದೆ. ಸೂರ್ಯ ಕೊನೆಯ ಬಾರಿಗೆ ಪುಣೆಯಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಈ ಪಂದ್ಯದಲ್ಲಿಯೂ ಅವರು ಶತಕ ಬಾರಿಸುವ ನಿರೀಕ್ಷೆಯೊಂದನ್ನು ಮಾಡಬಹುದು.



ಮೂರನೇ ಪಂದ್ಯದಲ್ಲಿ ಶಮಿಗಾಗಿ ಜಾಗ ಬಿಟ್ಟುಕೊಟ್ಟಿದ್ದ ಎಡಗೈ ವೇಗಿ ಅರ್ಶ್‌ದೀಪ್‌ ಸಿಂಗ್‌ ಈ ಪಂದ್ಯದಲ್ಲಿ ಮತ್ತೆ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಅಧಿಕವಾಗಿದೆ. ಅರ್ಶ್‌ದೀಪ್‌ ಮರಳಿದರೆ ಸ್ಪಿನ್ನರ್‌ ರವಿ ಬಿಷ್ಣೋಯ್‌ ಹೊರಗುಳಿಯಬೇಕಾದೀತು.

ಪುಣೆಯ ಪಿಚ್ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡಕ್ಕೂ ನೆರವು ನೀಡಲಿದೆ. ಸ್ಪಿನ್ನರ್‌ಗಳು ಮೇಲುಗೈ ಸಾಧಿಸಬಹುದು. ಇಲ್ಲಿಯವರೆಗೆ ಇಲ್ಲಿ 4 ಟಿ20 ಪಂದ್ಯಗಳನ್ನು ಆಡಲಾಗಿದ್ದು, ತಲಾ 2 ಪಂದ್ಯಗಳಂತೆ ಮೊದಲು ಮತ್ತು ಚೇಸಿಂಗ್‌ ನಡೆಸಿದ ತಂಡಗಳು ಗೆದ್ದಿವೆ. ಭಾರತ ಕೊನೆಯ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಆಡಿತ್ತು. ಆದರೆ 16 ರನ್‌ಗಳಿಂದ ಸೋಲನ್ನು ಕಂಡಿತ್ತು. ಆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅಕ್ಷರ್ ಪಟೇಲ್ ಅದ್ಭುತ ಬ್ಯಾಟಿಂಗ್ ಮಾಡಿ ಅರ್ಧಶತಕ ಸಿಡಿಸಿದ್ದರು. ಆದರೆ ಈಗ ಉಭಯ ಆಟಗಾರರು ಕೂಡ ಮಂಕಾಗಿದ್ದಾರೆ. ಇಂಗ್ಲೆಂಡ್ ತಂಡ ಇಲ್ಲಿ ಕೇವಲ ಒಂದು ಟಿ20 ಪಂದ್ಯವನ್ನು ಆಡಿದ್ದು, ಆ ಪಂದ್ಯದಲ್ಲಿ ಭಾರತ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು.

ಇದನ್ನೂ ಓದಿ ರಣಜಿ ಕಮ್‌ಬ್ಯಾಕ್‌ನಲ್ಲಿ ಕೊಹ್ಲಿ 6ಕ್ಕೆ ಕ್ಲೀನ್‌ ಬೌಲ್ಡ್‌

ಸಂಭಾವ್ಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್ (ವಿ.ಕೀ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಧ್ರುವ್ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್/ ಅರ್ಶ್‌ದೀಪ್‌ ಸಿಂಗ್‌ ವರುಣ್ ಚಕ್ರವರ್ತಿ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ) ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಸಲೀತ್ ಮತ್ತು ಫಿಲ್ ಸಾಲ್ಟ್ ಮತ್ತು ಮಾರ್ಕ್ ವುಡ್.