ಆನ್‌ಲೈನ್ ಗೇಮ್‌ಗೆ ಯುವಕ ಬಲಿ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ ʼರಮ್ಮಿ ಆನ್‌ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಗೇಮ್ ಆಡಬೇಡಿʼ ಎಂದು ಡೆತ್ ನೋಟ್‌ನಲ್ಲಿ ಮನವಿ ಮಾಡಿದ್ದಾನೆ.
ಹಾಸನ: ರಾಜ್ಯದಲ್ಲಿ ಆನ್‌ಲೈನ್ ಗೇಮ್‌ಗೆ (Online Game) ಮತ್ತೊಂದು ಬಲಿಯಾಗಿದ್ದು, ಡೆತ್ ನೋಟ್ (Death Note) ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಾಸನ (Hasan News) ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ಬಸ್ ನಿಲ್ದಾಣದ ಬಳಿಯಿರುವ ಪುಷ್ಪಗಿರಿ ಲಾಡ್ಜ್‌ನಲ್ಲಿ ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ (23) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಕೇಶ್ ಟಾಟಾ ಕ್ಯಾಪಿಟಲ್ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ತಿಂಗಳಿಂದ ಆನ್‌ಲೈನ್ ಗೇಮ್ ಆಡುತ್ತಿದ್ದ ಎನ್ನಲಾಗಿದೆ.
ರಮ್ಮಿ ಗೇಮ್‌ನಲ್ಲಿ ಆಟವಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ ರಾಕೇಶ್ ಗೌಡ ಇದೀಗ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ʼರಮ್ಮಿ ಆನ್‌ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಗೇಮ್ ಆಡಬೇಡಿʼ ಎಂದು ಡೆತ್ ನೋಟ್‌ನಲ್ಲಿ ಮನವಿ ಮಾಡಿದ್ದಾನೆ.
ಉತ್ತರ ಕನ್ನಡದಲ್ಲಿ ಗರ್ಭ ಧರಿಸಿದ ಹಸುವಿನ ತಲೆ ಕಡಿದು ಕ್ರೌರ್ಯ
ಕಾರವಾರ: ಬೆಂಗಳೂರಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಘಟನೆ ನಡೆದ ಬೆನ್ನಲ್ಲೇ ಹೊನ್ನಾವರದ ಸಾಲ್ಕೋಡಿನ ಕೊಂಡಕುಳಿಯಲ್ಲಿ ದುರುಳರು, ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ವಿಕೃತಿ ಮರೆದಿರುವುದು ನಡೆದಿದೆ.
ಕೊಂಡಕುಳಿ ಕೃಷ್ಣ ಆಚಾರಿ ಎಂಬುವವರ ಹಸು ಮೇವಿಗಾಗಿ ಹೊರಗಡೆ ಹೋಗಿತ್ತು. ಆದರೆ ರಾತ್ರಿ ಹಸು ಬಾರದ ಹಿನ್ನೆಲೆಯಲ್ಲಿ ಮಾಲೀಕ ಹುಡುಕಾಡಿದ್ದಾರೆ. ಆಗ ಹಸು ಹುಡುಕಲು ಹೋದ ಮಾಲೀಕನಿಗೆ ಆಘಾತ ಕಾದಿತ್ತು. ಕಿರಾತಕರು ಹಸುವಿನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ, ದೇಹ ತೆಗೆದುಕೊಂಡು ಹೋಗಿದ್ದಾರೆ. ತನ್ನ ಹಸುವಿನ ರುಂಡ ನೋಡಿದ ಮಾಲೀಕ ಆಘಾತಕ್ಕೊಳಗಾಗಿದ್ದು, ಈ ಬಗ್ಗೆ ಹೊನ್ನಾವರ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.