ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಬಂಟ್ವಾಳದಲ್ಲಿ ಯುವಕನ ಕೊಲೆ: ದಕ್ಷಿಣ ಕನ್ನಡ ಮತ್ತೆ ಉದ್ವಿಗ್ನ, ನಿಷೇಧಾಜ್ಞೆ ಜಾರಿ

ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರು ಹರಿದಿದೆ. ಯುವಕನೊಬ್ಬನನ್ನು ಇರಿದು ಕೊಲೆ (Murder Case) ಮಾಡಲಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬಂಟ್ವಾಳದಲ್ಲಿ ಯುವಕನ ಕೊಲೆ: ದಕ್ಷಿಣ ಕನ್ನಡ ಮತ್ತೆ ಉದ್ವಿಗ್ನ, ನಿಷೇಧಾಜ್ಞೆ

ಕೊಲೆಯಾದ ಅಬ್ದುಲ್‌ ರಹೀಂ

ಹರೀಶ್‌ ಕೇರ ಹರೀಶ್‌ ಕೇರ May 28, 2025 7:01 AM

ಮಂಗಳೂರು: ದಕ್ಷಿಣ ಕನ್ನಡದ (Dakshina Kannada) ಬಂಟ್ವಾಳದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ (Murder Case) ಮಾಡಲಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಚೇತರಿಸಿಕೊಳ್ಳುತ್ತಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಂಟ್ವಾಳ ತಾಲೂಕಿನ ಅಡ್ಡೂರು ಎಂಬಲ್ಲಿ ಕೊಳತ್ತಮಜಲು ನಿವಾಸಿ, ಪಿಕಪ್ ಚಾಲಕ ಅಬ್ದುಲ್‌ ರಹೀಮ್ (Abdul Rahim) ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಜೊತೆಗಿದ್ದ ಸಹೋದರ ಹನೀಫ್ (Hanif) ಎಂಬಾತನ ಮೇಲೂ ದಾಳಿ ಮಾಡಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಘಟನೆ ನಡೆದಿದೆ. ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದಾಳಿ ಮಾಡಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಹೀಮ್ ಮೇಲೆ ತಲ್ವಾರ್‌ನಿಂದ ದಾಳಿ ನಡೆಸಿದ್ದಾರೆ. ರಹೀಂನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ. ಜೊತೆಗಿದ್ದ ಸಹೋದರ ಹನೀಫ್ ಎಂಬಾತನ ಮೇಲೂ ದಾಳಿ ಮಾಡಲಾಗಿದೆ. ಸಹೋದರನ ಎದರೇ ರಹೀಂ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನ

ಮಂಗಳೂರಿನ ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಮೃತ ಅಬ್ದುಲ್ ರಹೀಮ್ ಮೃತದೇಹ ಇಡಲಾಗಿದೆ. ಶವಗಾರದ ಬಳಿ ನೂರಾರು ಜನರು ಜಮಾಯಿಸಿದ್ದಾರೆ. ಅತ್ತ ಘಟನೆಯಲ್ಲಿ ಗಂಭೀರ ಗಾಯಗೊಂಡು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿರುವ ಕಲಂಧರ್ ಶಫಿಗೆ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆ‌ ಎದುರು ಪೊಲೀಸರ ವಿರುದ್ದ ಮೃತನ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯೆನಪೋಯಾ ಆಸ್ಪತ್ರೆ ಮುಂಭಾಗ ನೂರಾರು ಸಂಖ್ಯೆಯ ಜನರು ಒಂದೆಡೆ ಸೇರಿ ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ಪ್ರತಿಭಟನಾಕಾರರು ಆಂಬುಲೆನ್ಸ್ ಸೇರಿದಂತೆ ಎಲ್ಲಾ ವಾಹನಗಳನ್ನು ತಡೆ ಹಿಡಿದು ಪ್ರತಿಭಟನೆ ಮಾಡಿ ತಕ್ಷಣ ಬಂಧನ ಮಾಡುವಂತೆ ಆಗ್ರಹಿಸಿದರು.ಮುಂದುವರೆದು ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲೂ ಪ್ರತಿಭಟನೆ ನಡೆಸಿದ್ದಾರೆ.

ಕೊಲೆಯ ಕಾರಣ ಮತ್ತು ಆರೋಪಿಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಬಂಟ್ವಾಳ ಡಿವೈವೆಸ್ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಶಂಕಿತರನ್ನು ಕರೆದು ವಿಚಾರಣೆಯನ್ನು ಮಾಡುತ್ತಿದ್ದೇವೆ. ತನಿಖೆ ನಡೆಯುತ್ತಿರೋದರಿಂದ ಬೇರೆ ಮಾಹಿತಿ ಹೇಳಲು ಸಾಧ್ಯವಿಲ್ಲ ಅಂತ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ಜಾರಿ

ದ‌ಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಎನ್ಎಸ್ 163ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ಇಂದಿನಿಂದ ಮೇ 30ರ ಸಂಜೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿ ಆನಂದ್ ಆದೇಶ ನೀಡಿದ್ದಾರೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.

ಇದನ್ನೂ ಓದಿ: Murder Case: ಪ್ರೀತಿಸಿ ಮದುವೆಯಾದ ಪತಿಯನ್ನೇ ಪ್ರಿಯಕರನ ಮೂಲಕ ಕೊಲೆ ಮಾಡಿಸಿದ ಪತ್ನಿ