ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KN Rajanna: ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

KN Rajanna: ತುಮಕೂರು ವಿಶ್ವವಿದ್ಯಾಲಯದಲ್ಲಿ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟ, ತುಮಕೂರು ವಿವಿ, ದರೈಸ್ತ್ರೀ ಕಲ್ಚರಲ್ ಟ್ರಸ್ಟ್ ಹಾಗೂ ಸಮತಾ ಪ್ರಕಾಶನದ ವತಿಯಿಂದ ಹಮ್ಮಿಕೊಂಡಿದ್ದ ತೊಗಲ ಯೋಗಿ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಅವರು ಮಾತನಾಡಿದ್ದಾರೆ.

ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

Profile Prabhakara R Mar 16, 2025 10:05 PM

ತುಮಕೂರು: ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ. ಹೊಸ ತಂತ್ರಜ್ಞಾನದಿಂದ ದುಷ್ಪರಿಣಾಮವೇ ಹೆಚ್ಚು ಆಗುತ್ತಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ತಿದ್ದುವ ಕೆಲಸ ಮಾಡಬೇಕು. ಒಳ್ಳೆಯ ದಾರಿಯಲ್ಲಿ ಹೋಗುವಂತೆ ನೋಡಿಕೊಳ್ಳಬೇಕು. ಭವಿಷ್ಯದಲ್ಲಿ ಮಕ್ಕಳು ಸಮಾಜದ ಆಸ್ತಿಯಾಗಬೇಕು. ಹಾಗೆ ಮಕ್ಕಳನ್ನು ಬೆಳೆಸಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ (KN Rajanna) ಕಿವಿ ಮಾತು ಹೇಳಿದರು. ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟ, ತುಮಕೂರು ವಿಶ್ವವಿದ್ಯಾಲಯ, ದರೈಸ್ತ್ರೀ ಕಲ್ಚರಲ್ ಟ್ರಸ್ಟ್ ಹಾಗೂ ಸಮತಾ ಪ್ರಕಾಶನದ ವತಿಯಿಂದ ತುಮಕೂರು ವಿವಿಯಲ್ಲಿ ಹಮ್ಮಿಕೊಂಡಿದ್ದ ತೊಗಲ ಯೋಗಿ ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತೊಗಲ ಯೋಗಿ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಸಾಹಿತಿ ಡಾ.ಅಗ್ರಹಾರ ಕೃಷ್ಣಮೂರ್ತಿ, ದಲಿತ ಮತ್ತು ಬಂಡಾಯ ಸಾಹಿತ್ಯದ 50 ವರ್ಷಗಳ ಕಾಲಘಟ್ಟದಲ್ಲಿ ಆರಂಭದಲ್ಲಿ ಇದ್ದ ಸಿಟ್ಟು, ಸೆಡವು, ನೋವು, ಆಕ್ರೋಶ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿದೆ. ಆದರೆ ಯಾವುದಕ್ಕೂ ರಾಜಿಯಾಗದೆ ತಮಗೆ ಅನಿಸಿದ್ದನ್ನು ಹೇಳುವ ರೀತಿ ಬದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಡಾ.ನಟರಾಜ ಬೂದಾಳ್ಕ, ವನ ಸಂಕಲನ ಕುರಿತು ಡಾ.ಜಿ.ವಿ.ಆನಂದಮೂರ್ತಿ ಮಾತನಾಡಿದರು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಸಾಹಿತಿ ತುಂಬಾಡಿ ರಾಮಯ್ಯ, ಕುಲಸಚಿವೆ ನಾಹಿದಾ ಜಮ್ ಜಮ್, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಮಾಜಿಕ ಹೋರಾಟಗಾರ ಡ್ಯಾಗೇರಹಳ್ಳಿ ವಿರೂಪಾಕ್ಷ, ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ.ಬಿ.ಆರ್.ರೇಣುಕಪ್ರಸಾದ್, ತೊಗಲ ಯೋಗಿ ಕೃತಿಕಾರ ಡಾ.ಶಿವಣ್ಣ ತಿಮ್ಲಾಪುರ ಮತ್ತಿತರರಿದ್ದರು.

ಈ ಸುದ್ದಿಯನ್ನೂ ಓದಿ | Fasal Bima Yojana: ಫಸಲ್ ಬಿಮಾ ಯೋಜನೆ ಇನ್ನಷ್ಟು ರೈತಸ್ನೇಹಿಯಾಗಲಿ: ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ

ರಾಜಕಾರಣ ಹಣದ ಹೊಳೆಯಲ್ಲಿ ತೇಲಿಹೋಗುತ್ತಿದೆ: ಡಾ.ಬಸವರಮಾನಂದ ಸ್ವಾಮೀಜಿ

Alemari

ತುಮಕೂರು: ಚುನಾವಣೆಯಲ್ಲಿ ಹಣಕ್ಕಾಗಿ ತಮ್ಮ ಮತ ಮಾರಿಕೊಂಡರೆ ಅದು ತಮ್ಮ ಮಗಳನ್ನು ಮಾರಿಕೊಂಡಂತೆ ಆಗುತ್ತದೆ ಎಂದು ವನಕಲ್ಲು ಮಲ್ಲೇಶ್ವರ ಸಂಸ್ಥಾನದ ಡಾ.ಬಸವರಮಾನಂದ ಸ್ವಾಮೀಜಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ನಡೆದ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಏರ್ಪಡಿಸಿದ್ದ ಜಿಲ್ಲಾ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಇಂದು ರಾಜಕೀಯ ಸಿದ್ಧಾಂತ ಗಾಳಿಗೆ ತೂರಿಹೋಗುತ್ತಿದೆ. ಚುನಾವಣೆಯಲ್ಲಿ ಚಲಾವಣೆಯಾಗುವ ಮತಗಳು ಅಪಮೌಲ್ಯವಾಗುತ್ತಿವೆ. ರಾಜಕಾರಣ ಹಣದ ಹೊಳೆಯಲ್ಲಿ ತೇಲಿಹೋಗುತ್ತಿರುವುದು ವಿಷಾದಕರ ಎಂದು ಹೇಳಿದರು.

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಒಂದು ವಿಧಾನಸಭಾ ಚುನಾವಣೆಗೆ 20-25 ಕೋಟಿ ಹಣ ಬೇಕೆಂದರೆ ನಮ್ಮ ರಾಜಕೀಯ ವ್ಯವಸ್ಥೆ ಎತ್ತ ಸಾಗಿದೆ ಎಂದು ಅರ್ಥವಾಗುತ್ತದೆ. ಇಂದಿನ ರಾಜಕೀಯ ವ್ಯವಸ್ಥೆ ಅಸಹ್ಯ ಹುಟ್ಟಿಸಿದೆ ಎಂದು ಹೇಳಿದರು.

ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಅಧ್ಯಕ್ಷ ಎಂ.ಪ್ರಕಾಶ್ ಮಾತನಾಡಿ, ಸಣ್ಣಸಣ್ಣ ಜಾತಿಗಳು ಒಳಗೊಂಡ ಅಲೆಮಾರಿ ಸಮುದಾಯಕ್ಕೆ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಇಲ್ಲ, ನಮ್ಮಲ್ಲಿ ಒಬ್ಬರೂ ಶಾಸಕರಿಲ್ಲ, ನಮ್ಮ ಪರ ವಿಧಾನಸಭೆಯಲ್ಲಿ ಧ್ವನಿ ಮಾಡುವವರು ಇಲ್ಲ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕು ಮಟ್ಟದ ಸಮಿತಿಗಳನ್ನು ರಚನೆ ಮಾಡಿ ಸಂಘಟನೆ ಮಾಡಲಾಗುತ್ತಿದೆ ಎಂದರು.

ಬಿಜೆಪಿ ಮುಖಂಡ ಜಿ.ಎನ್.ಬೆಟ್ಟಸ್ವಾಮಿ ಮಾತನಾಡಿ, ನಮ್ಮ ಸಮುದಾಯದ ಸಂಘಟನೆ ಕೊರತೆಯಿಂದಾಗಿ ತಾವು ಎರಡು ಬಾರಿ ಗುಬ್ಬಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು. ಗೆಲುವು ಪಡೆದಿದ್ದರೆ ನಮಗೂ ರಾಜಕೀಯ ಶಕ್ತಿ ಬರುತ್ತಿತ್ತು. ನನಗೆ ಆದಂತೆ ಯಾವ ಮುಖಂಡರಿಗೂ ಆಗುವುದು ಬೇಡ, ಮುಂದಾದರೂ ನಾವು ಸಂಘಟಿತರಾಗಬೇಕು ಎಂದರು.

ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿ, ನಮ್ಮ ಹಕ್ಕು ಪಡೆಯಲು ಹೋರಾಟವೇ ಅಸ್ತ್ರವಾಗಬೇಕು. ರಾಜ್ಯಾದ್ಯಂತ ಸಮುದಾಯ ಶಕ್ತಿಯುತವಾಗಿ ಸಂಘಟನೆಯಾಗಿ ಬೃಹತ್ ಹೋರಾಟ ಮಾಡಿದರೆ ಸರ್ಕಾರ ನಮ್ಮ ಬಳಿಗೆ ಬರುತ್ತದೆ, ನಮ್ಮ ಅಹವಾಲುಗಳನ್ನು ಕೇಳಿ ಬಗೆಹರಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗೃಹ ಸಚಿವರ ವಿಶೇಷಾಧಿಕಾರಿ ಡಾ.ನಾಗಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಕುಮಾರ್ ಜೋಗಿ, ಜಂಟಿ ಕಾರ್ಯದರ್ಶಿ ಡಿ.ಕಮಲ, ಜಿಲ್ಲಾಧ್ಯಕ್ಷ ಮಂಜುನಾಥ್, ಜಿಲ್ಲಾ ಗೌರವಾಧ್ಯಕ್ಷ ಕೆ.ಚಿಕ್ಕಣ್ಣ, ಸೇರಿದಂತೆ ವಿವಿಧ ಪದಾಧಿಕಾರಿಗಳು, ತಾಲೂಕು ಘಟಕಗಳ ಅಧ್ಯಕ್ಷರು ಭಾಗವಹಿಸಿದ್ದರು.