ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

‌Murder Case: ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಮರ್ಡರ್

ಕೊಲೆಯಾದ ಯುವಕನನ್ನು ನಿಖಿಲ್ ಎಂದು ಗುರುತಿಸಲಾಗಿದ್ದು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕೃತ್ಯದ ಹಿಂದೆ ಪ್ರೇಮ ಪ್ರಕರಣ, ಹಳೆ ದ್ವೇಷದ ಹಿನ್ನೆಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸ್ಥಳದಲ್ಲಿರುವ ಸಿಸಿಟಿವಿ ಪೂಟೇಜ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಮರ್ಡರ್

ಹರೀಶ್‌ ಕೇರ ಹರೀಶ್‌ ಕೇರ Apr 1, 2025 12:15 PM

ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಮತ್ತೊಂದು ಭೀಕರವಾದ ಮರ್ಡರ್ (Crime news) ಆಗಿದ್ದು ಯುವಕನನ್ನು ಐದಾರು ಜನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ 2ನೇ ಹಂತದ ಎಕೆ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ನಿಖಿಲ್ ಎಂದು ಗುರುತಿಸಲಾಗಿದೆ. ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದಿದ್ದ ಐದಾರು ದುಷ್ಕರ್ಮಿಗಳು ನಿಖಿಲ್‌ನನ್ನು ಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಕೊಲೆಯಾದ ನಿಖಿಲ್ ಮೃತದೇಹವನ್ನು ಸದ್ಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕೃತ್ಯದ ಹಿಂದೆ ಪ್ರೇಮ ಪ್ರಕರಣ, ಹಳೆ ದ್ವೇಷದ ಹಿನ್ನೆಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸ್ಥಳದಲ್ಲಿರುವ ಸಿಸಿಟಿವಿ ಪೂಟೇಜ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚೆಗೆ ಆನೆಕಲ್‌ನಲ್ಲಿ ರೌಡಿ ಶೀಟರ್‌ ಒಬ್ಬನನ್ನು ಇದೇ ರೀತಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗಿತ್ತು. ನೇಪಾಳಿ ಮಂಜ ಎಂಬ ರೌಡಿಯನ್ನು ಸ್ನೇಹಿತರೇ ಕರೆ ಮಾಡಿ ಕರೆಸಿಕೊಂಡಿದ್ದರು. ಎಣ್ಣೆ ಪಾರ್ಟಿಯ ಸಂದರ್ಭದಲ್ಲಿ ಅಲ್ಲಿಗೆ ದಾಳಿ ಮಾಡಿದ ದುಷ್ಕರ್ಮಿಗಳು ನೇಪಾಳಿ ಮಂಜನನ್ನು ಕೊಚ್ಚಿ ಕೊಂದಿದ್ದರು.

ಅಕ್ರಮ ಗಾಂಜಾ ಮಾರಾಟ, ಇಬ್ಬರ ಬಂಧನ

ಚಿಂತಾಮಣಿ: ಅಕ್ರಮ ಗಾಂಜಾ ಮಾರಾಟ ಮಾಡಲು ಬಂದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಿಸ್ಸಾರ್ ಅಹಮದ್ ಬಿನ್ ನಾಸೀರ್ ಅಹಮದ್.(33 ವರ್ಷ)ಕೈವಾರ ಗ್ರಾಮ, ಚಿಂತಾಮಣಿ ತಾಲ್ಲೂಕು ಫಯಾಜ್ ಪಾಷ ಬಿನ್ ಫಾರೂಕ್ ಪಾಷ (32 ವರ್ಷ) ವಾರ್ಡ್ ನಂ13. ಕೈವಾರ ಗ್ರಾಮ, ಚಿಂತಾಮಣಿ ತಾಲ್ಲೂಕು,ಅರ್ಬಾಜ್ ಖಾನ್ ಬಿನ್ ವಜೀರ್ ಖಾನ್ ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಎಸ್ ಪಿ ಕುಶಾಲ್ ಚೌಕ್ಸೆ,ಅಪಾರ ಜಿಲ್ಲಾ ರಕ್ಷಣಾಧಿಕಾರಿ ರಾಜಾ ಇಮಾಮ್ ಖಾಸಿಮ್,ಮಾರ್ಗದರ್ಶನದಲ್ಲಿ ಚಿಂತಾಮಣಿ ಉಪವಿಭಾಗರವರ ಮುರಳೀಧರ ಪಿ.ಡಿ.ವೈ.ಎಸ್.ಪಿ ನೇತೃತ್ವದಲ್ಲಿ,ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಠಾಣೆಯ ಸಿಬ್ಬಂದಿಯವ ರೊಂದಿಗೆ ಕೈವಾರದಲ್ಲಿ ಗಸ್ತು ಮಾಡಿಮಾಡಿಕೊಂಡು ಕೈವಾರ-ಗವಿ ಕಡೆಗೆ ಹೋಗುವ ರಸ್ತೆಯಲ್ಲಿ ಗಸ್ತಿನಲ್ಲಿದ್ದಾಗ ಮಾತೇಶ್ವರ ಇಂಡಿಯನ್ ಗ್ಯಾಸ್‌ ಗೋಡೌನ್ ಹಿಂಭಾಗದಲ್ಲಿರುವ ಸ್ಮಶಾನದ ಬಳಿ ಯಾರೋ ಇಬ್ಬರು ಒಂದು ಕವರ್ ನಲ್ಲಿ ಅಕ್ರಮ ಗಾಂಜಾವನ್ನು ಇಟ್ಟುಕೊಂಡಿದ್ದು ಪೊಲೀಸರು ಇವರನ್ನು ಸೆರೆ ಹಿಡಿದು ಅವರಿಂದ 1 ಕೆ.ಜಿ. 80 ಗ್ರಾಂ ತೂಕವಿದ್ದು ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: Murder Case: ಪತಿಯ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಹಿಳೆ ಸಂಶಯಾಸ್ಪದ ಸಾವು