ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಯುವರಾಜ್ ಸಿಂಗ್!
ಸತತ ಎರಡು ಟೆಸ್ಟ್ ಸರಣಿಗಳಲ್ಲಿನ ಸೋಲಿನ ಹೊರತಾಗಿಯೂ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ಅವರನ್ನು ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಎರಡು ಟೆಸ್ಟ್ ಸರಣಿಗಳ ಸೋಲಿನ ಹೊರತಾಗಿಯೂ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಹೆಡ್ ಕೋಚ್ ಗೌತಮ್ ಗಂಭೀರ್ ಅವರನ್ನು ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಬೆಂಬಲಿಸಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ, ನ್ಯೂಜಿಲೆಂಡ್ ವಿರುದ್ದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 0-3 ಅಂತರದಲ್ಲಿ ಕ್ಲೀನ್ ಸ್ವೀಪ್ ಆಘಾತ ಅನುಭವಿಸಿತ್ತು. ನಂತರ ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 1-3 ಅಂತರದಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ಟೀಮ್ ಇಂಡಿಯಾ ವಿಫಲವಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಯುವರಾಜ್ ಸಿಂಗ್, "ಗೌತಮ್ ಗಂಭೀರ್ ಅವರು ಈಗಷ್ಟೇ ಭಾರತ ತಂಡದ ವಾತಾವರಣಕ್ಕೆ ಬಂದಿದ್ದಾರೆ ಹಾಗೂ ಅವರಿಗೆ ಹೆಚ್ಚಿನ ಸಮಯ ನೀಡಬೇಕಾದ ಅಗತ್ಯವಿದೆ. ಇನ್ನು ರೋಹಿತ್ ಶರ್ಮಾ ಅವರು ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದಾರೆ ಹಾಗೂ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿದ್ದರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌ಗೆ 5 ಟ್ರೋಫಿ ಗೆದ್ದುಕೊಟ್ಟಿದ್ದಾರೆ," ಎಂದು ಶ್ಲಾಘಿಸಿದ್ದಾರೆ.
IND vs ENG: ಟಿ20ಐ ಸರಣಿಗೂ ಮುನ್ನ ಭಾರತ ತಂಡಕ್ಕೆ 3 ದಿನಗಳ ಕ್ಯಾಂಪ್!
"ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರೇ ಸ್ವತಃ ಪ್ಲೇಯಿಂಗ್ ಇಲೆವೆನ್‌ಯಿಂದ ಹೊರಗುಳಿಯುವ ಮೂಲಕ ಬೇರೆ ಆಟಗಾರನಿಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಈ ಹಿಂದೆ ಎಷ್ಟು ನಾಯಕರು ಈ ರೀತಿ ನಡೆದುಕೊಂಡಿದ್ದಾರೆ? ಕಳೆದ 3-4 ವರ್ಷಗಳಿಂದ ಅವರು ಏನು ಮಾಡಿದ್ದಾರೆಂದು ನಾನು ನೋಡಿದ್ದೇನೆ. ಆದ್ದರಿಂದ ಒಂದು ಟೂರ್ನಿಯಿಂದ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಸೋಲಿಗಿಂತ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿ ಸೋಲು ತುಂಬಾ ನೋವು ಉಂಟು ಮಾಡಿದೆ," ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.
ರೋಹಿತ್ ಶರ್ಮಾ ಅವರು ತಮ್ಮ ನಾಯಕತ್ವದಲಿ ಮಿಶ್ರ ಫಲಿತಾಂಶವನ್ನು ಹೊಂದಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು. ಆದರೆ, 2024ರ ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಕಮ್‌ಬ್ಯಾಕ್ ಮಾಡಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 2023ರ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೂ ಲಗ್ಗೆ ಇಟ್ಟಿತ್ತು.
ಭಾರತದ ಆಟಗಾರರಿಗೆ 10 ಅಂಶಗಳ ಶಿಸ್ತಿನ ಮಾರ್ಗಸೂಚಿಗಳನ್ನು ಹೊರಡಿಸಿದ ಬಿಸಿಸಿಐ!
2024ರ ಜುಲೈ ನಂತರ ರೋಹಿತ್ ಶರ್ಮಾ ಆಟಗಾರನಾಗಿ ಹಾಗೂ ನಾಯಕನಾಗಿ ವಿಫಲರಾಗಿದ್ದಾರೆ. 2024ರ ತವರು ಸೀಸನ್‌ನಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಅವರು ಆಡಿದ ಎಂಟು ಪಂದ್ಯಗಳ 15 ಇನಿಂಗ್ಸ್‌ಗಳಿಂದ ಗಳಿಸಿರುವುದು ಕೇವಲ 164 ರನ್‌ಗಳು ಮಾತ್ರ. ಇದರಲ್ಲಿ ಇವರ ವೈಯಕ್ತಿಕ ಗರಿಷ್ಠ ಮೊತ್ತ 52 ರನ್‌ಗಳು ಮಾತ್ರ. ಇತ್ತೀಚೆಗೆ ಮುಗಿದಿದ್ದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಅವರು ಕೇವಲ 31 ರನ್ ಗಳಿಸಿದ್ದರು.