ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʻನಂಬಲು ಆಗುತ್ತಿಲ್ಲʼ: ವಿರಾಟ್‌ ಕೊಹ್ಲಿಯ ಟೆಸ್ಟ್‌ ನಿವೃತ್ತಿ ಬಗ್ಗೆ ಆಘಾತ ವ್ಯಕ್ತಪಡಿಸಿದ ರವಿ ಶಾಸ್ತ್ರಿ!

Ravi shastri on Virat Kohli's Test Retirement: ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವುದದಿಂದ ಟೀಮ್‌ ಇಂಡಿಯಾ ಮಾಜಿ ಹೆಡ್‌ ಕೋಚ್‌ ರವಿ ಶಾಸ್ತ್ರಿ ಆಘಾತ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಟೆಸ್ಟ್‌ಗೆ ನಿವೃತ್ತಿ ಘೋಷಿಸಿರುವುದನ್ನು ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ವಿರಾಟ್‌ ಕೊಹ್ಲಿಯ ಟೆಸ್ಟ್‌ ನಿವೃತ್ತಿ ಬಗ್ಗೆ ರವಿ ಶಾಸ್ತ್ರಿ ಹೇಳಿಕೆ.

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಆಧುನಿಕ ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ(Virat Kohli) ಮೇ 12 ರಂದು ಸೋಮವಾರ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆ ಮೂಲಕ 14 ವರ್ಷಗಳ ದೀರ್ಘಾವಧಿ ಟೆಸ್ಟ್‌ ಕ್ರಿಕೆಟ್‌ ಪಯಣಕ್ಕೆ ಪೂರ್ಣ ವಿರಾಮ ಇಟ್ಟಿದ್ದಾರೆ. ವಿರಾಟ್‌ ಕೊಹ್ಲಿಯ ಟೆಸ್ಟ್‌ ನಿವೃತ್ತಿಯ ಬಗ್ಗೆ ಅಭಿಮಾನಿಗಳು ಸೇರಿದಂತೆ ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಅದರಂತೆ ಟೀಮ್‌ ಇಂಡಿಯಾ ಮಾಜಿ ಹೆಡ್‌ ಕೋಚ್‌ ರವಿ ಶಾಸ್ತ್ರಿ (Ravi Shastri) ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಕೊಹ್ಲಿ ಟೆಸ್ಟ್‌ಗೆ ನಿವೃತ್ತಿ ಪಡೆದಿರುವುದನ್ನು ನನ್ನಿಂದ ನಂಬಲು ಆಗುತ್ತಿಲ್ಲ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

2017ರ ಬಳಿಕ ಭಾರತ ತಂಡಕ್ಕೆ ರವಿ ಶಾಸ್ತ್ರಿ ಹೆಡ್‌ ಕೋಚ್‌ ಆಗಿದ್ದ ವೇಳೆ ವಿರಾಟ್‌ ಕೊಹ್ಲಿ ಭಾರತ ತಂಡದ ಮೂರೂ ಸ್ವರೂಪದಲ್ಲಿ ನಾಯಕರಾಗಿದ್ದರು. ಈ ಇಬ್ಬರ ಕಾಂಬೀನೇಷನ್‌ನಲ್ಲಿ ಭಾರತ ತಂಡ, 2018-19ರ ಸಾಲಿನಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ನಂತರ ರವಿ ಶಾಸ್ತ್ರಿ ಅವಧಿಯಲ್ಲಿ ಎರಡನೇ ಬಾರಿ ಭಾರತ ತಂಡ, ಅಜಿಂಕ್ಯ ರಹಾನೆ ನಾಯಕತ್ವದಲ್ಲಿಯೂ ಕಾಂಗರೂ ನಾಡಿನಲ್ಲಿ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

ʻಕಿಂಗ್‌ ಆಫ್‌ ಆಸ್ಟ್ರೇಲಿಯಾʼ: ವಿರಾಟ್‌ ಕೊಹ್ಲಿಯ ಟೆಸ್ಟ್‌ ಕ್ರಿಕೆಟ್‌ನ ಪ್ರಮುಖ ದಾಖಲೆಗಳು!

ವಿರಾಟ್‌ ಕೊಹ್ಲಿ ಟೆಸ್ಟ್‌ ನಿವೃತ್ತಿ ಬಗ್ಗೆ ತಮ್ಮ ಅಧೀಕೃತ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ರವಿ ಶಾಸ್ತ್ರಿ, ಟೆಸ್ಟ್‌ ಕ್ರಿಕೆಟ್‌ಗೆ ಕೊಹ್ಲಿ ರಾಯಭಾರಿ ಎಂದು ಬಣ್ಣಿಸಿದ್ದಾರೆ. ಇವರು ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವುದನ್ನು ನನ್ನಿಂದ ನಂಬಲು ಈಗಲೂ ನಂಬಲೂ ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ರವಿ ಶಾಸ್ತ್ರಿ ಅವರ ಕಾಂಬಿನೇಷನ್‌ನಲ್ಲಿ ಟೀಮ್‌ ಇಂಡಿಯಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅದ್ಭುತ ಸಾಧನೆ ಮಾಡಿದೆ.

"ನೀವು ಟೆಸ್ಟ್‌ ಕ್ರಿಕೆಟ್‌ ಅನ್ನು ಮುಗಿಸಿದ್ದೀರಿ ಎಂಬುದನ್ನು ನಾನು ನಂಬುವುದಿಲ್ಲ. ನೀವು ಆಟಗಾರನಾಗಿ ಹಾಗೂ ನಾಯಕನಾಗಿ ಆಡಿದ ಪ್ರತಿಯೊಂದು ಹಾದಿಯನ್ನು ನೋಡಿದಾಗ ನೀವು ಆಧುನಿಕ ಕ್ರಿಕೆಟ್‌ನ ದಂತಕತೆ ಮತ್ತು ಟೆಸ್ಟ್‌ ಕ್ರಿಕೆಟ್‌ನ ರಾಯಭಾರಿ ಎಂದು ನನಗೆ ಅನಿಸುತ್ತದೆ. ನನಗೂ ಹಾಗೂ ಪ್ರತಿಯೊಬ್ಬರಿಗೂ ಸ್ಮರಣೀಯ ನೆನಪುಗಳನ್ನು ನೀಡಿರುವುದಕ್ಕೆ ನಿಮಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದನ್ನು ನಾನು ಜೀವನ ಪರ್ಯಂತ ಪಾಲಿಸುವ ಸಂಗತಿ ಇದಾಗಿದೆ. ನಿಮ್ಮ ಭವಿಷ್ಯಕ್ಕೆ ಒಳ್ಳೆಯದಾಗಲಿ ಚಾಂಪಿಯನ್‌. ದೇವರು ಒಳ್ಳೆಯದು ಮಾಡಲಿ," ಎಂದು ರವಿ ಶಾಸ್ತ್ರಿ ಟ್ವೀಟ್‌ ಮಾಡಿದ್ದಾರೆ.



ವಿರಾಟ್‌ ಕೊಹ್ಲಿಯ ಟೆಸ್ಟ್‌ ಕ್ರಿಕೆಟ್‌ ಅಂಕಿಅಂಶಗಳು

2011ರಲ್ಲಿ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ವಿರಾಟ್‌ ಕೊಹ್ಲಿ, ಇಲ್ಲಿಯವರೆಗೂ ಆಡಿದ 123 ಟೆಸ್ಟ್‌ ಪಂದ್ಯಗಳಿಂದ 46.85ರ ಸರಾಸರಿಯಲ್ಲಿ 9230 ರನ್‌ಗಳನ್ನು ಕಲೆ ಹಾಕಿದ್ದಾರೆ. ಇದರಲ್ಲಿ ಅವರು 30 ಶತಕಗಳು ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಿಡ್ನಿ ಟೆಸ್ಟ್‌ ಕೊನೆಯ ಪಂದ್ಯವಾಗಿದೆ.

Virat Kohli: ಭಾವುಕ ಪೋಸ್ಟ್‌ ಶೇರ್‌ ಮಾಡಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ವಿರಾಟ್‌ ಕೊಹ್ಲಿ

ಭಾರತೀಯ ಟೆಸ್ಟ್‌ನ ಯಶಸ್ವಿ ನಾಯಕ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಅತ್ಯಂತ ಯಶಸ್ವಿ ಭಾರತೀಯ ನಾಯಕರಾಗಿದ್ದಾರೆ. ಕೊಹ್ಲಿಯ ನಾಯಕತ್ವದಲ್ಲಿ ಭಾರತ ತಂಡ 68 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 40 ರಲ್ಲಿ ಗೆಲುವು ಕಂಡಿದೆ. ಇವರ ಬಳಿಕ ಈ ಸಾಧಕರ ಪಟ್ಟಿಯಲ್ಲಿ ಎಂಎಸ್‌ ಧೋನಿ (27), ಸೌರವ್‌ ಗಂಗೂಲಿ ( 21) ಇದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್‌ ಸ್ಮಿತ್‌ ಅಗ್ರ ಸ್ಥಾನದಲ್ಲಿದ್ದಾರೆ.