Tuesday, 27th July 2021

ಮೈಸೂರು ಪಾಲಿಕೆ ನೂತನ ಆಯುಕ್ತರಾಗಿ ಲಕ್ಷ್ಮೀಕಾಂತ್‌ ರೆಡ್ಡಿ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಲಕ್ಷ್ಮೀಕಾಂತ್‌ ರೆಡ್ಡಿ ಭಾನುವಾರ ಅಧಿಕಾರ ಸ್ವೀಕರಿಸಿ ದರು. ಶಿಲ್ಪಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಲಕ್ಷ್ಮೀಕಾಂತ್‌ ಅವರಿಗೆ ಶಿಲ್ಪಾ ನಾಗ್‌ ಅವರು ಅಧಿಕಾರ ಹಸ್ತಾಂತರ ಮಾಡಿದರು. ರೆಡ್ಡಿ ಅವರು ಆಹಾರ ಮತ್ತು ನಾಗರಿಕ ಸರಬ ರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಕೋವಿಡ್‌ ನಿರ್ವಹಣೆ ವಿಚಾರವಾಗಿ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್‌ ಅವರು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜತೆ ಜಟಾಪಟಿಗೆ ಇಳಿದಿದ್ದರು. ಜಿಲ್ಲಾಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದರಲ್ಲದೆ, ಪ್ರತಿಭಟನಾರ್ಥವಾಗಿ ಆಯುಕ್ತರ ಹುದ್ದೆ ಹಾಗೂ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದರು.

ಸರ್ಕಾರ ಶನಿವಾರ ರಾತ್ರಿ ಇಬ್ಬರನ್ನೂ ಎತ್ತಂಗಡಿ ಮಾಡಿತ್ತು.

Leave a Reply

Your email address will not be published. Required fields are marked *