Thursday, 23rd March 2023

ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌: ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು/ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮೈಸೂರಿನಲ್ಲಿ ಪೈಲಟ್‌ ಯೋಜನೆಯಾಗಿ ಜಾರಿ ಮಾಡುತ್ತಿದ್ದು, ಇಲ್ಲಿ ಯಶಸ್ವಿಯಾದರೆ ರಾಜ್ಯ ಎಲ್ಲ ನಗರ ಮತ್ತು ಪಟ್ಟಣ ಗಳಿಗೂ ಎಲ್‌ಇಡಿ ಬಲ್ಬ್‌ಗಳನ್ನೇ ಅಳವಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

₹109.91 ಕೋಟಿ ಅಂದಾಜು ವೆಚ್ಚದಲ್ಲಿ ಈ ಯೋಜನೆ ಜಾರಿಗೆ ತರಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಮೈಸೂರಿನಲ್ಲಿ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸುವುದರಿಂದ ವಾರ್ಷಿಕ 58 ಕೋಟಿ ವಿದ್ಯುತ್‌ ಕಂಪನಿಗೆ ಉಳಿತಾಯವಾಗುತ್ತದೆ ಎಂದು ಹೇಳಿದರು.

error: Content is protected !!