Friday, 7th May 2021

ಲಗಾಮ್ ಕನ್ನಡದ ಲಗಾನ್‌ ಆಗಲಿ

ರಿಯಲ್‌ ಸ್ಟಾರ್‌’ಗೆ ಪವರ್‌ ಸ್ಟಾರ್‌ ಹಾರೈಕೆ

ಗಜ, ದಂಡಂ ದಶಗುಣಂ, ಬೃಂದಾವನ, ಪವರ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಿಗೆ ಆಕ್ಷನ್‌ಕಟ್ ಹೇಳಿರುವ ನಿರ್ದೇಶಕ ಕೆ.
ಮಾದೇಶ್. ಅವರೀಗ ಮೊದಲ ಬಾರಿಗೆ ನಾಲ್ಕು ಭಾಷೆಗಳಲ್ಲಿ ಹೊಚ್ಚ ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ.

ಅದೇ ‘ಲಗಾಮ್’. ಈ ಚಿತ್ರದ ಮಹೂರ್ತ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ನೆರವೇರಿತು. ಪವರ್‌ಸ್ಟಾರ್ ಪುನೀತ್
ರಾಜ್‌ಕುಮಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಕೋರಿದರು. ಈ ರೀತಿಯ ಅದ್ಧೂರಿ ಮುಹೂರ್ತ ನೋಡಿ ಎರಡು ವರ್ಷಗಳೇ ಆಗಿತ್ತು. ಆದರೆ ಕರೋನಾ ಸಮಯದಲ್ಲೂ ಇಷ್ಟೊಂದು ಅದ್ಧೂರಿಯಾಗಿ ಆಗಿ ಮುಹೂರ್ತ ಮಾಡಿರುವುದೇ ಒಂದು
ಪಾಸಿಟಿವ್ ಎನರ್ಜಿ.

ಸಿನಿಮಾನೂ ಅಷ್ಟೇ ಅದ್ಧೂರಿಯಾಗಿ ಮೂಡಿಬರಲಿದೆ ಎಂಬ ಭರವಸೆ ನನಗಂತೂ ಇದೆ. ಉತ್ತಮ ತಂತ್ರಜ್ಞರು, ಕಲಾವಿದರಿರುವ ಪಕ್ಕಾ ಕಮರ್ಷಿಯಲ್ ಸಿನಿಮಾವಿದು. ಜತೆಗೆ ಒಳ್ಳೆಯ ಸಂದೇಶವಿರುವ ಮನರಂಜನಾತ್ಮಕ ಚಿತ್ರ. ಲಗಾಮ್ ಕನ್ನಡದ ಲಗಾನ್ ಆಗುತ್ತೆ ಎಂಬ ವಿಶ್ವಾಸವಿದೆ. ಕಬ್ಜ ದೊಡ್ಡ ಮಟ್ಟದ ಸಿನಿಮಾ, ಸೆಟ್‌ನಲ್ಲಿಯೇ ಬಹುತೇಕ ಶೂಟಿಂಗ್ ಮಾಡಲಾಗುತ್ತಿದೆ. ಹೀಗಾ ಗಿಯೇ ಸಾಕಷ್ಟು ಸಮಯ ಬೇಕು. ಅದೇ ಸಮಯದಲ್ಲಿ ಈ ಸಿನಿಮಾ ಮಾಡುತ್ತಿದ್ದೇನೆ’ ಎಂದು ಲಗಾಮ್ ಚಿತ್ರದ ಬಗ್ಗೆ ಮಾಹಿತಿ ನೀಡಿದರು ರಿಯಲ್ ಸ್ಟಾರ್ ಉಪೇಂದ್ರ.

ಲಗಾಮ್ ಕನ್ನಡ, ಹಿಂದಿ, ತೆಲುಗು, ತಮಿಳು ಹೀಗೆ ನಾಲ್ಕು ಭಾಷೆಗಳಲ್ಲಿ ಅದ್ಧೂರಿ ಮೇಕಿಂಗ್‌ನಲ್ಲಿ ಮೂಡಿಬರಲಿರುವ ಕಮರ್ಷಿಯಲ್ ಸಿನಿಮಾ. ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಪ್ರಾರಂಭ ಮಾಡಲಿದ್ದೇವೆ. ಭ್ರಷ್ಟಾಚಾರಕ್ಕೆ, ಮೋಸಕ್ಕೆ, ವಂಚನೆಗೆ, ಅತ್ಯಾಚಾರಕ್ಕೆ, ದ್ರೋಹಕ್ಕೆ, ಕರೋನಾಗೆ ಲಗಾಮ್ ಹಾಕುವುದೇ ಈ ಚಿತ್ರದ ಮುಖ್ಯ ಕಥಾವಸ್ತು ಎಂದರು ನಿರ್ದೇಶಕ
ಕೆ.ಮಾದೇಶ್.

ಇನ್ನು ಐದಾರು ವರ್ಷಗಳ ಹಿಂದೆ ಉಪೇಂದ್ರ ಅವರ ಜತೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ನಟಿ ಹರಿಪ್ರಿಯಾ ಅವರಿಗೆ ಮೊದಲ ಬಾರಿಗೆ ಸಿನಿಮಾದಲ್ಲಿ ರಿಯಲ್ ಸ್ಟಾರ್‌ಗೆ ನಾಯಕಿಯಾಗಿ ತೆರೆ ಹಂಚಿಕೊಳ್ಳುತ್ತಿರುವ ಸಂಭ್ರಮ. ಮೊದಲ ಬಾರಿ ಉಪೇಂದ್ರ ಅವರ ಜತೆ ಸಿನಿಮಾದಲ್ಲಿ ನಟಿಸುತ್ತಿರುವ ಖುಷಿಯಿದೆ. ಹಾಗೇಯೇ ಸಾಧು ಕೋಕಿಲಾ ಅವರ ಮ್ಯೂಸಿಕ್ ಅಂದರೆ
ನನಗೆ ತುಂಬಾ ಇಷ್ಟ.

ಇದೇ ಮೊದಲ ಬಾರಿಗೆ ನನ್ನ ಸಿನಿಮಾಗೆ ಅವರು ಮ್ಯೂಸಿಕ್ ನೀಡುತ್ತಿರುವುದು ನನಗೆ ಮತ್ತಷ್ಟು ಖುಷಿ ನೀಡಿದೆ. ಇತ್ತೀಚಿನ ದಿನಗಳಲ್ಲಿ ಪೌರಾಣಿಕ, ಐತಿಹಾಸಿಕ ಸಿನಿಮಾಗಳಲ್ಲೇ ಹೆಚ್ಚು ನಟಿಸುತ್ತಿದ್ದೆ. ಆದರೆ ಈ ಸಿನಿಮಾದಲ್ಲಿ ಮಾಡ್ರನ್ ಹುಡುಗಿಯ
ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಒಳ್ಳೆಯ ಕಥೆ ಇದೆ ಎಂದು ಸಂತಸ ವ್ಯಕ್ತಪಡಿಸಿದರು ಹರಿಪ್ರಿಯಾ.

ಇನ್ನು ಸಾಧು ಕೋಕಿಲಾ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾತ್ರವಲ್ಲದೇ, ಪ್ರಮುಖ ಪಾತ್ರದಲ್ಲೂ ನಟಿಸಲಿದ್ದಾರೆ.

Leave a Reply

Your email address will not be published. Required fields are marked *