Tuesday, 5th July 2022

ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ: ಪ್ರಧಾನಿ ಮೋದಿ

ಶಿವಮೊಗ್ಗ : ಶಿವಮೊಗ್ಗ ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಇನ್ನು ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.

ಶಿವಮೊಗ್ಗದ ಹುಣಸೋಡ ಬಳಿಯ ಕಲ್ಲು ಗಣಿ ಪ್ರದೇಶದಲ್ಲಿ ನಡೆದ ಜಿಲೆಟಿನ್ ಸ್ಪೋಟಗೊಂಡ ಪರಿಣಾಮ 8 ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.