Tuesday, 17th May 2022

ಮಂಡ್ಯ: ವಾರದಲ್ಲಿ ನಾಲ್ಕು ದಿನ ಲಾಕ್ ಡೌನ್ ?

ಮಂಡ್ಯ: ಮಂಡ್ಯ ಜಿಲ್ಲೆಯಾದ್ಯಂತ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಪ್ರತಿ ವಾರದ ಭಾನುವಾರ, ಸೋಮವಾರ, ಗುರುವಾರ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಎಂದಿನಂತೆ ಅವಕಾಶ ಇರಲಿದ್ದು, ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ.

ಅಂದು ಹೋಟೆಲ್ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಿದ್ದಾರೆ.