Sunday, 29th January 2023

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು: ಲೋಕಾಯುಕ್ತರ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣ ಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿಂದು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಹೈಕೋರ್ಟ್ ‌ನೀಡಿ ರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ರಾಜ್ಯಸಭೆ ಚುನಾವಣೆ ಕುರಿತಂತೆ ಮಾತನಾಡಿ, ಬಿಜೆಪಿ ಯಾರಿಗೂ ಆಫರ್ ಕೊಟ್ಟಿಲ್ಲ. ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಮತ ಗಳು ನಮ್ಮ ಬಳಿ ಇವೆ. ಕಾಂಗ್ರೆಸ್ ಅಥವಾ ಜೆಡಿಎಸ್‌ ನಡುವೆ ಏನೂ ಆಫರ್ ಇದೆಯೋ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ನೀರಾವರಿ ಪ್ರಾಧಿಕಾರದ ತೀರ್ಪು ಅಂತಿಮವಾಗಿದೆ.‌ ಕೋರ್ಟ್ ನಿರ್ದೇಶನದ ಮೇರೆಗೆ, ಪ್ರಾಧಿಕಾರ ರಚನೆ ಆಗಿರುವುದರಿಂದ ಮಧ್ಯಪ್ರವೇಶ ಮಾಡಲಾಗದು. ಏನೇ ನಿರ್ಧಾರವಿದ್ದರೂ ಪ್ರಾಧಿಕಾರವೇ ಮಾಡುತ್ತದೆ ಎಂದರು.

error: Content is protected !!