Friday, 30th September 2022

ಕಾರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ತಾಯಿ, ಮಕ್ಕಳ ದುರಂತ ಸಾವು

ಚಿಕ್ಕಬಳ್ಳಾಪುರ: ಲಾರಿ ಮತ್ತು ಕಾರಿನ ನಡುವಿನ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಕಳೆದ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ-7ರ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡ ಪೈಲಗುರ್ಕಿ ಬಳಿ ಘಟನೆ ನಡೆದಿದೆ.
ಹೈದರಾಬಾದ್ ನ ಜಯಶ್ರೀ (50), ಅಕ್ಷಯ್ (28) ಅರ್ಶು (24) ಮೃತರು. ಜಯಶ್ರೀ ಪತಿ ದಿನೇಶ್ (53) ಗಂಭೀರ ಗಾಯ ಗೊಂಡಿದ್ದು, ಹೆಚ್ಚಿನ‌ ಚಿಕಿತ್ಸೆಗಾಗಿ ಬೆಂಗಳೂರಿನ‌ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮೃತಪಟ್ಟವರೆಲ್ಲ ಹೈದರಾಬಾದ್ ಮೂಲದವರು ಎಂದು ತಿಳಿದುಬಂದಿದೆ. ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಜಯಶ್ರೀ ಹಾಗೂ ದಿನೇಶ್ ಕುಟುಂಬ ಹೈದರಾಬಾದ್’ನ  ಜಿಗಣಿ ಮಾರ್ಬಲ್ ಶೋರೂಮ್ ಮಾಲೀಕರು ಎಂದು ಹೇಳಲಾಗಿದೆ.

ಬೆಂಗಳೂರಿನಿಂದ ಹೈದರಾಬಾದ್ ಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಅತಿವೇಗದಲ್ಲಿ ಬಂದ ಲಾರಿ, ಸ್ಪೀಡ್ ಹಂಪ್ ಬಳಿ ಕಾರು ಬ್ರೇಕ್ ಹಾಕಿದ ವೇಳೆ ಹಿಂಬದಿಯಿಂದ ಅತಿ ವೇಗದಿಂದ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.