Sunday, 27th November 2022

ಭರದಿಂದ ಸಾಗಿದ ಲವ್‌ ಲಿ

ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಲವ್ ಲಿ, ಸಿನಿಮಾ ಬಿಡುಗಡೆಗೂ ಮೊದಲೇ ಕುತೂಹಲ ಮೂಡಿಸಿದೆ.

ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು ಲವ್ ಲಿ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಮೊದಲ ಶೆಡ್ಯೂಲ್ ಯಶಸ್ವಿ ಯಾಗಿ ಮುಗಿಸಿರುವ ಚಿತ್ರತಂಡ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣ ದಲ್ಲಿ ಬ್ಯುಸಿಯಾಗಿದೆ.

ನಾಗರಭಾವಿಯ ಸುತ್ತಮುತ್ತ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣ ನಡೆಯುತ್ತಿದೆ. ಇಲ್ಲಿನ ಕಿಂಗ್ಸ್ ಕ್ಲಬ್ ನಲ್ಲಿ ಆಫೀಸ್ ಸೆಟ್ ನಿರ್ಮಾಣ ಮಾಡಲಾಗಿದ್ದು ಅಲ್ಲಿಯೇ ಚಿತ್ರೀಕರಣ ನಡೆಸ ಲಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಟಿ ಸಮೀಕ್ಷಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಲವ್ ಲಿ ಚಿತ್ರಕ್ಕೆ ಚೇತನ್ ಕೇಶವ್ ನಿರ್ದೇಶನವಿದೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ ವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾಖಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಕೊರಿಯನ್ ವೆಬ್ ಸೀರೀಸ್, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ ವಾಗಿದೆ. ಸುಬ್ಬಲಕ್ಷ್ಮಿ ಸಂಸಾರ ಧಾರಾವಾಹಿ ಖ್ಯಾತಿಯ ಸಮೀಕ್ಷಾ ಲವ್ ಲಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದಾರೆ.

ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಅಶ್ವಿನ್ ಕೆನಡಿ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿದೆ.