Monday, 26th October 2020

ಮಹಿಳಾ ಮೋರ್ಚಾದ ಪದಾಧಿಕಾರಿಗಳ ಪರಿಚಯ ಸಭೆ

ಯಲ್ಲಾಪುರ /ಶಿರಸಿ: ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಈ ದಿನ ಮಹಿಳಾ ಮೋರ್ಚಾದ ಪದಾಧಿಕಾರಿ ಗಳ ಪರಿಚಯ ಸಭೆ ನಡೆಯಿತು.

ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವಕರ್ ಮಹಿಳಾ ಮೋರ್ಚಾದ ಪದಾಧಿಕಾರಿಗಳ ಪಟ್ಟಿಯನ್ನು ಬಿಡು ಗಡೆ ಮಾಡಿದರು.

ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರುತಿ ಹೆಗಡೆ ಮಹಿಳೆಯರು ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಸಭೆಯಲ್ಲಿ ತಿಳಿಸಿದರು. ತಾಲೂಕಾ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಭಟ್ ಪ್ರಾಸ್ತಾವಿಕ ಮಾತನಾಡಿದರು.

ಸಭೆಯನ್ನು ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ಜಿಲ್ಲಾಪಂಚಾಯತ ಸದಸ್ಯೆಯರಾದ ರೂಪಾ ಬೂರ್ಮನೆ, ಪಟ್ಟಣ ಪಂಚಾಯಿತಿ ಸದಸ್ಯೆಯರಾದ ಶ್ಯಾಮಿಲಿ ಪಾಟನಕರ್ ಹಾಗೂ ಮಹಿಳಾ ಮೋರ್ಚಾದ ತಾಲೂಕಾ ಪ್ರಭಾರಿಗಳಾದ ಶರ್ಮಿಲಾ ಚಂದ್ರಶೇಖರ, ನಿರ್ಮಲಾ ಶೆಟ್ಟಿ ಹಾಗೂ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸವಿತಾ ಗಾಂವಕರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *