Tuesday, 17th May 2022

ಬ್ಲ್ಯಾಕ್ ಫಂಗಸ್: ಮಂಡ್ಯದಲ್ಲಿ ವ್ಯಕ್ತಿ ಸೋಂಕಿಗೆ ಬಲಿ

ಮಂಡ್ಯ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಮೊದಲ ಸಾವು ಸಂಭವಿಸಿದೆ. 68 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿ ದ್ದಾರೆ.

ನಗರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ನಾಲ್ವರಿಗೆ ಬ್ಲ್ಯಾಕ್ ಫಂಗಸ್ ದೃಢವಾಗಿತ್ತು. ಈ ಪೈಕಿ ಒಬ್ಬ ಮೃತಪಟ್ಟಿದ್ದು, ಮೂವರಿಗೆ ಚಿಕಿತ್ಸೆ ಮುಂದುವರೆಸ ಲಾಗಿದೆ. ಮಂಡ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.