ಮುಂದಿನ ವಾರ ಮದುವೆಯಾಗಲಿದ್ದವ ಅಣ್ಣನ ಮಕ್ಕಳಿಂದಲೇ ಹತ್ಯೆ!
ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಹತ್ಯೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದುಬಂದಿದೆ.