Wednesday, 1st December 2021

ಮಂಗಳೂರಿನ ಸಿಸಿಬಿ ಇನ್ಸ್ ಪೆಕ್ಟರ್ ದಿಢೀರ್ ವರ್ಗಾವಣೆ ?

ಮಂಗಳೂರು : ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದಂತ ಸಿಸಿಬಿ ಇನ್ಸ್ ಪೆಕ್ಟರ್ ಅನ್ನು ದಿಢೀರ್ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ರಾಜ್ಯದಲ್ಲಿ ಸ್ಯಾಂಡಲ್’ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂತಹ ಪ್ರಕರಣವನ್ನು ಸಿಸಿಬಿ ಒಂದೊಂದೇ ನೆಲೆಗಟ್ಟಿನಲ್ಲಿ ತನಿಖೆ ನಡೆಸುತ್ತಾ, ಹಲವರನ್ನು ವಿಚಾರಣೆ ನಡೆಸುವ ಮೂಲಕ ಶಾಕ್ ನೀಡುತ್ತಿದೆ.

ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಉಡುಪಿಯ ಕಾಪು ಠಾಣೆಯ ಸಿಐ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಸಿಸಿಬಿ ಇನ್ಸ್ ಪೆಕ್ಟರ್ ಶಿವ ಪ್ರಕಾಶ್ ನಾಯ್ಕ್ ಅವರ ವರ್ಗಾವಣೆಯ ಹಿಂದೆ, ಡ್ರಗ್ಸ್ ಪೆಡ್ಲರ್ ಕಿಶೋರ್ ಅವರನ್ನು ಬಂಧಿಸಿದ್ದೇ ಕಾರಣ ಎನ್ನಲಾಗುತ್ತಿದೆ.