Monday, 15th August 2022

ಚಿತ್ರದುರ್ಗದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು

ಚಿತ್ರದುರ್ಗ: ಚಿತ್ರದುರ್ಗದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾ ಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭವಾಗಲಿದ್ದು, ನೂತನ ಕಟ್ಟಡ ನಿರ್ಮಾಣ ಭರದಿಂದ ಸಾಗಿದೆ.

ಚಿತ್ರದುರ್ಗದಲ್ಲಿ 150 ಎಂಬಿಬಿಎಸ್ ಸೀಟುಗಳನ್ನು ಹೊಂದಲಿರುವ ‘ಚಿತ್ರದುರ್ಗ ವೈದ್ಯ ಕೀಯ ವಿಜ್ಞಾನಗಳ ಸಂಸ್ಥೆ’ ನಿರ್ಮಾಣಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಿವಿಲ್ ಕಾಮಗಾರಿ ಸೇರಿ ಒಟ್ಟು 500 ಕೋಟಿ ರೂ. ಖರ್ಚಾಗಲಿದೆ ಎಂದು ಸಚಿವ ಡಾ.ಕೆ.ಧಾಕರ್ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಇರುವ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಜೊತೆ ಹೊಸದಾಗಿ 4 ಸಂಸ್ಥೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಚಿಕ್ಕ ಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥಗೆ 100 ಎಂಬಿಬಿಎಸ್ ಸೀಟುಗಳ ಪ್ರವೇಶ ಮಿತಿ ಯೊಂದಿಗೆ 2022-23ನೇ ಸಾಲಿಗೆ ಲೆಟರ್ ಆಫ್ ಇಂಟೆಂಟ್ ನೀಡಲಾಗಿದೆ.

ಚಿತ್ರದುರ್ಗದಲ್ಲೂ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಆ ಮೂಲಕ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲಿದೆ. ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡ ಆಸ್ಪತ್ರೆಗಳಲ್ಲಿ ಬಡವರಿಗೆ ಉನ್ನತ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ ಎಂದು ತಿಳಿಸಿದ್ದಾರೆ.

ಪ್ರತಿ 1,000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ ಕರ್ನಾ’ಕದಲ್ಲಿ 1,800 ಜನಸಂಖ್ಯೆಗೆ ಒಬ್ಬ ವೈದ್ಯರ ಲಭ್ಯತೆಯಿದೆ. ಈ ಅಸಮತೋಲನ ಬಗೆಹರಿಸಲು ಹಾಗೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ. ಇದೇ ಪ್ರಯತ್ನದ ಭಾಗವಾಗಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ಸಚಿವರು ತಿಳಿಸಿದರು.