Sunday, 25th September 2022

ಮೆಟ್ರೋ ಫೀಡರ್ ಸಾರಿಗೆ ಸೇವೆ ಆ.30ರಿಂದ ಲಭ್ಯ

ಬೆಂಗಳೂರು : ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ, ಬಿಎಂಟಿಸಿ ಯಿಂದ ಮೆಟ್ರೋ ಫೀಡರ್ ಸಾರಿಗೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಬಿಎಂಟಿಸಿ ತಿಳಿಸಿದೆ.

ಈ ಕುರಿತಂತೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮವು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆಯನ್ನು ಆ.29ರಿಂದ ಜಾರಿಗೆ ಬರುವಂತೆ ಪ್ರಾರಂಭಿಸುತ್ತಿದೆ. ಪ್ರಯಾಣಿಕರ ಮೆಟ್ರೋ ಫೀಡರ್ ಸಾರಿಗೆ ಸೇವೆಯು ಆ.30ರಿಂದ ಲಭ್ಯವಾಗಲಿದೆ.

ಮೈಸೂರು ರಸ್ತೆ ಭಾಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ 35 ಬಸ್ಸುಗಳಿಂದ 9 ಮಾರ್ಗಗಳಲ್ಲಿ 499 ಸುತ್ತುವಳಿಗಳೊಂದಿಗೆ ಮೆಟ್ರೋ ಫೀಡರ್ ಸೇವೆಗಳನ್ನು ಪ್ರಾರಂಭಿಸುತ್ತಿದೆ.