Wednesday, 1st February 2023

ಹಾಲಿನ ಬೆಲೆ ಹೆಚ್ಚಳವಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು : ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.

ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಪರ್ಯಾಯ ಮಾರ್ಗ ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

error: Content is protected !!