Tuesday, 9th August 2022

ಅಭ್ಯರ್ಥಿ ಮುನಿರತ್ನ ಪರ ಸಚಿವ ಶಿವರಾಮ ಮತ ಬೇಟೆ

ಬೆಂಗಳೂರು/ಶಿರಸಿ: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ಆರ್.ಆರ್. ನಗರ ಕ್ಷೇತ್ರದ ಪ್ರಮುಖ ನಗರಗಳಲ್ಲಿ ಮನೆ ಮನೆಗಳಿಗೆ ತೆರಳಿ ಭಾಜಪದ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಮತಚಲಾಯಿಸುವಂತೆ ಮತದಾರರಲ್ಲಿ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ‌.ಪಾಟೀಲ್ , ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.