Friday, 24th March 2023

ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ, ಒಂದೇ ದಿನ 10 ಲಕ್ಷ ಲಸಿಕೆ: ಡಾ.ಕೆ.ಸುಧಾಕರ್

ಕೋಲಾರ : ರಾಜ್ಯದಲ್ಲಿ ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ ನಡೆಸಲು ಈಗಾಗಲೇ ನಿರ್ಧರಿಸಲಾಗಿದ್ದು, ಒಂದೇ ದಿನ 10 ಲಕ್ಷ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸಾಮಾನ್ಯ ದಿನಗಳಲ್ಲಿ 5 ಲಕ್ಷ ಲಸಿಕೆ, ಒಂದು ತಿಂಗಳಲ್ಲಿ ಕನಿಷ್ಠ 1.50 ಕೋಟಿ ಡೋಸ್ ಲಸಿಕೆ ನೀಡುವ ಗುರಿ ಇದೆ. ಡಿಸೆಂಬರ್ ವೇಳೆಗೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಬೇಕು ಎಂಬ ಉದ್ದೇಶವಿದೆ. ಗಡಿಭಾಗದ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಕೇಂದ್ರದ ಆರೋಗ್ಯ ಸಚಿವರು ಕೂಡ ಸಲಹೆ ನೀಡಿದ್ದಾರೆ ಎಂದರು.

ಆಗಸ್ಟ್ ನಲ್ಲಿ 1.12 ಕೋಟಿ ಲಸಿಕೆ ಬಂದಿದೆ. ಒಂದೇ ತಿಂಗಳಲ್ಲಿ 1.10 ಕೋಟಿ ಲಸಿಕೆ ನೀಡಲಾಗಿದೆ. ಈವರೆಗೆ ಆಗಸ್ಟ್ ತಿಂಗಳಲ್ಲೇ ಅತ್ಯಧಿಕ ಲಸಿಕೆ ನೀಡಲಾಗಿದೆ. ಸೆಪ್ಟೆಂಬರ್ ನಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ ಇದೆ. ಕೇರಳದಿಂದ ಪ್ರತಿ ದಿನ ಬರುವ ವಿದ್ಯಾರ್ಥಿಗಳು ಸೇರಿದಂತೆ ಕೆಲವರಿಗೆ ಮಾರ್ಗಸೂಚಿಯಲ್ಲಿ ವಿನಾಯಿತಿ ನೀಡಲಾ ಗಿದೆ ಎಂದರು.

ಲಸಿಕೆ ಪಡೆಯದವರಿಗೆ ರೇಷನ್, ಪಿಂಚಣಿ ತಡೆಹಿಡಿಯುವುದನ್ನು ಸರ್ಕಾರ ಒಪ್ಪುವುದಿಲ್ಲ. ಈ ರೀತಿ ನಿರ್ಧಾರವನ್ನು ಸರ್ಕಾರ ಎಲ್ಲೂ ಮಾಡಿಲ್ಲ. ಜನರು ಲಸಿಕೆ ಹಾಕಿಸಿಕೊಳ್ಳಬೇಕೆಂಬುದು ಇದರ ಉದ್ದೇಶ. ಜಾಗೃತಿ ಮೂಡಿಸುವ ಭರದಲ್ಲಿ ಏನಾದರೂ ಆಗಿರಬಹುದು. ಈ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.

 

error: Content is protected !!