Tuesday, 26th October 2021

ಸಚಿವ ಮುರುಗೇಶ್ ಆರ್.ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್

ಬೆಂಗಳೂರು: ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್ ಆರ್.ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು(@NiraniMurugesh)  ಹ್ಯಾಕ್ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ನನ್ನ ಟ್ವಿಟರ್ ಖಾತೆಯನ್ನು ಕೆಲವರು ‌ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡ ಲಾಗಿದೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ ಎಂದಿದ್ದಾರೆ.

ಹ್ಯಾಕರ್‌ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಯಾರೊಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಬಾರದೆಂದು ಮನವಿ ಮಾಡಿದ್ದಾರೆ.

ನಾವು ಟ್ವಿಟರ್‌ಗೆ ದೂರು ನೀಡಿದ್ದೇವೆ. ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *