Tuesday, 29th September 2020

ಜೆಡಿಎಸ್‍ ಶಾಸಕ ಡಿ.ಸಿ.ಗೌರಿ ಶಂಕರ್’ಗೆ ಕೊರೋನಾ ಪಾಸಿಟಿವ್

ತುಮಕೂರು: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಪಾಸಿಟಿವ್‍‍ ಎಂದು ವರದಿ ಯಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಿನ್ನೆ ಜ್ವರ ಇದ್ದ ಹಿನ್ನೆಲೆಯಲ್ಲಿ ಕರೋನ ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್  ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *