Monday, 16th May 2022

ಶಾಸಕ ಪ್ರೀತಂಗೌಡ ಇತಿಮಿತಿಯಲ್ಲಿ ಮಾತನಾಡಬೇಕು: ಸಚಿವ ವಿ.ಸೋಮಣ್ಣ

ಮಂಡ್ಯ: ಒಂದು ಸಾರಿ ಎಂಎಲ್​ಎ ಆದ ತಕ್ಷಣಕ್ಕೆ ದೇವರಲ್ಲ, ಶಾಸಕ ಪ್ರೀತಂಗೌಡ ಇತಿಮಿತಿಯಲ್ಲಿ ಮಾತನಾಡಬೇಕು ಎಂದು ಸಚಿವ ವಿ. ಸೋಮಣ್ಣ ಹಾಸನ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಮಾತನಾಡಿ, ಹೆಚ್​.ಡಿ ದೇವರಗೌಡರ ಕುಟುಂಬಕ್ಕೆ 50 ವರ್ಷ ರಾಜಕೀಯ ಇತಿಹಾಸವಿದೆ. ಅವರು ರಾಷ್ಟ್ರದ ಪ್ರಧಾನಿಗಳಾಗಿದ್ದವರು. ಅಂಥವರ ಬಗ್ಗೆ ಹಾಗೆಲ್ಲ ಮಾತನಾಡಬಾರದು. ನಾನು ಸಚಿವನಾಗಿದ್ದಾಗ ಪ್ರೀತಂ ಗೌಡ ಹುಟ್ಟಿರಲಿಲ್ಲ ಎಂದರು.

ಖಾತೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಬಸವರಾಜ ಬೊಮ್ಮಾಯಿ ಬುದ್ಧಿವಂತರು. ತಮ್ಮ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದರು.