Sunday, 27th November 2022

ಪ್ರಧಾನಿ ಮೋದಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ.

ಮಧ್ಯಾಹ್ನ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿ ದರು.

ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾ ವೇಶದಲ್ಲಿ ಪ್ರಧಾನಿ ಮೋದಿಯವರಿಗೆ ರಾಜ್ಯ ನಾಯಕರು ಪೇಟ, ಶಾಲು, ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಜೊತೆಗೆ ಶ್ರೀಕೃಷ್ಣನ ಪ್ರತಿಮೆ, ಪರುಶುರಾಮನ ಪ್ರತಿಮೆ ನೀಡಿ ಗೌರವಿಸಿದರು.

“ಭಾರತದ ಜನನಾಯಕ ಪ್ರಧಾನಿ ನರೇಂದ್ರ ಮೋದಿಯವರೆ, ಇಂದು ಕರಾವಳಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ದಿನ. ಈ ಕ್ಷೇತ್ರದ ಅಭವೃದ್ಧಿಯಾಗಲು ನಾಲ್ಕು ದಿಕ್ಕೂಗಳಲ್ಲಿಯೂ ಅಭಿವೃದ್ಧಿಯಾಗ ಬೆಕು. ಅಂತಹ 3,800 ಕೋಟಿಯ ನವ ಮಂಗಳೂರು ಬಂದರು ಪ್ರಾಧಿ ಕಾರದ ಯೋಜನೆಗಳಿಗೆ ಚಾಲನೆ ದೊರೆಯಲಿದೆ.

“ಎಲ್ಲರು ಡಬಲ್ ಇಂಜಿನ್ ಸರಕಾರದಿಂದಾದ ಪ್ರಯೋಜನಗಳೇನು ಎನ್ನುತ್ತಾರೆ. ಇದೇ ನೋಡಿ ನರೇಂದ್ರ ಮೋದಿ ನೇತೃತ್ವ ದಲ್ಲಿ ದೊಡ್ಡ ಮಟ್ಟದಲ್ಲಿ ಕೆಲಸ ಮಾಡುತ್ತಿದೆ. ಮೀನುಗಾರರಿಗೆ 100 ಹೈಸ್ಪೀಡ್ ಇಂಜಿನ್, ಎರಡು ಲಕ್ಷ ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ನೀಡುವುದು ಸೇರಿದಂತೆ ಹಲವು ಸಾಧನೆ ಮಾಡುತ್ತಿದೆ. ಡಬಲ್ ಇಂಜಿನ್ ಸರಕಾರ ಕರ್ನಾಟಕದ ಜೊತೆಗೆ ಭಾರತವನ್ನು ಮುನ್ನಡೆಸುತ್ತಿದೆ” ಎಂದರು.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡದ ಜೊತೆ ಜೊತೆಗೆ ಹಿಂದಿಯಲ್ಲಿಯೂ ಭಾಷಣ ಮಾಡಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದರು. ಬೃಹತ್ ಸಮಾವೇಶದಲ್ಲಿ ಜನರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 3,800 ಕೋಟಿ ರೂಪಾಯಿಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.