Tuesday, 21st March 2023

ಅಕ್ರಮ ಆಸ್ತಿ ಗಳಿಕೆ ಆರೋಪ: 30ಕ್ಕೂ ಹೆಚ್ಚು ಕಡೆ ಎಸಿಬಿ ದಾಳಿ

ACB Raid

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಮಂಗಳೂರು, ಉಡುಪಿ, ಮಂಡ್ಯ, ಬೆಂಗಳೂರು ಸೇರಿದಂತೆ 30ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ.

ಮಂಗಳೂರಿನ ನಗರ ಅಭಿವೃದ್ಧಿ ಘಟಕದ ಇಂಜಿನಿಯರ್ ಜಿ. ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಇಂಜಿನಿಯರ್ ಕೃಷ್ಣ, ಕೆಆರ್ ಡಿಎಲ್ ಅಧಿಕಾರಿ ಆರ್. ಪಿ ಕುಲಕರ್ಣಿ, ಕೋಲಾರದ ಮಾಲೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಾಯಕ ನಿರ್ದೇಶಕ ಎಚ್‌.ಆರ್. ಕೃಷ್ಣಪ್ಪ, ಮಂಡ್ಯದ ಅರಣ್ಯ ಅಧಿಕಾರಿ ವೆಂಕಟೇಶ್, ವಿಜಯಪುರ ಹೆಸ್ಕಾಂ ಇಂಜಿನಿಯರ್ ಸಿದ್ಧರಾಮ ಮಲ್ಲಿಕಾರ್ಜುನ್, ಬಳ್ಳಾರಿ ಎಲೆಕ್ರಿಕಲ್ ಇಂಜಿನಿಯರ್ ವಿಜಯ್ ಕುಮಾರ್ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.

ಗುರುವಾರ ದಾಳಿಗೆ ಒಳಗಾಗಿರುವ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಅಧಿಕಾರಿ ಗಳು ಸಂಗ್ರಹಿಸಿದ ಸೋರ್ಸ್ ವರದಿ ವೇಳೆಯೂ ಆರೋಪಕ್ಕೆ ಪೂರಕ ದಾಖಲೆಗಳು ಸಿಕ್ಕಿದ್ದವು. ಈ ಹಿನ್ನೆಲೆ ರಾಜ್ಯದೆಲ್ಲೆಡೆ ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಎಸಿಬಿ ಅಧಿಕಾರಿಗಳು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಕರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದ ಎಸಿಬಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ಇದೀಗ ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.

error: Content is protected !!