45 Movie: ಬಹುನಿರೀಕ್ಷಿತ ಮಲ್ಟಿಸ್ಟಾರರ್ ‘45’ ಚಿತ್ರದ ವಿಶೇಷ ಪೋಸ್ಟರ್ ಔಟ್
45 Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬೃಹತ್ ಗಾತ್ರದ ವಿಶೇಷ ಪೋಸ್ಟರ್ ಅನಾವರಣ ಮಾಡುವ ಮೂಲಕ ʼ45ʼ ಚಿತ್ರತಂಡ ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.


ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ʼಸೂರಜ್ ಪ್ರೊಡಕ್ಷನ್ʼ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹು ನಿರೀಕ್ಷಿತ ʼ45ʼ ಚಿತ್ರದ (45 Movie) ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟೀಸರ್ ಜನರ ಮನ ಗೆದ್ದಿದೆ. ಶಿವರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬೃಹತ್ ಗಾತ್ರದ ವಿಶೇಷ ಪೋಸ್ಟರ್ ಅನಾವರಣ ಮಾಡುವ ಮೂಲಕ ʼ45ʼ ಚಿತ್ರತಂಡ ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ.
ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ 63ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಶಿವರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬೃಹತ್ ಗಾತ್ರದ ವಿಶೇಷ ಪೋಸ್ಟರ್ ಅನಾವರಣ ಮಾಡುವ ಮೂಲಕ ʼ45ʼ ಚಿತ್ರತಂಡ ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಶಿವಣ್ಣ ಅವರ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಚಿತ್ರೀಕರಣ ಪೂರ್ಣಗೊಂಡಿರುವ ʼ45ʼ ಚಿತ್ರ ಸಿಜಿ ವರ್ಕ್‌ನಲ್ಲಿ ಬ್ಯುಸಿಯಾಗಿದೆ. ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಈ ಸುದ್ದಿಯನ್ನೂ ಓದಿ | Star Fashion 2025: ನಟ ಡಾ. ಶಿವರಾಜ್‌ಕುಮಾರ್ ಮಾಸ್ ಸ್ಟೈಲ್‌ಗೆ ಫ್ಯಾಷನ್ ದಿಗ್ಗಜರ ಫುಲ್ ಮಾರ್ಕ್ಸ್!