45 Movie: ಶಿವಣ್ಣ- ಉಪೇಂದ್ರ ನಟನೆಯ ʻ45ʼ ಚಿತ್ರಕ್ಕಾಗಿ ಹೊಸ ಸಾಹಸಕ್ಕೆ ಮುಂದಾದ ಅರ್ಜುನ್ ಜನ್ಯ; 7 ಜಿಲ್ಲೆಯ ಫ್ಯಾನ್ಸ್‌ಗೆ ಇದು ಹಬ್ಬ!
Shivarajkumar & Upendra: 45 ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವನ್ನು ನಿರ್ದೇಶಕ ಅರ್ಜುನ್ ಜನ್ಯ ಅವರು ವಿಭಿನ್ನವಾಗಿ ಆಯೋಜಿಸಿದ್ದಾರೆ. ಡಿಸೆಂಬರ್ 15 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದು, ಈ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.
-
ನಟ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಮಲ್ಟಿಸ್ಟಾರರ್ ಸಿನಿಮಾ ʻ45ʼ ಚಿತ್ರ ಡಿಸೆಂಬರ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಿಸೆಂಬರ್ 15 ರಂದು ಈ ಸಿನಿಮಾದ ಟ್ರೇಲರ್ ಅನಾವರಣವಾಗಲಿದೆ. ಟ್ರೇಲರ್ ಬಿಡುಗಡೆ ಸಮಾರಂಭವನ್ನು ವಿಭಿನ್ನವಾಗಿ ಅಯೋಜಿಸಲು ಚಿತ್ರತಂಡ ನಿರ್ಧರಿಸಿದೆ. ಈ ಕುರಿತು ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸಿನಿಮಾದ ನಿರ್ದೇಶಕ ಅರ್ಜುನ್ ಜನ್ಯ ಮಾಹಿತಿ ನೀಡಿದ್ದಾರೆ.
ಅರ್ಜುನ್ ಜನ್ಯ ಹೇಳಿದ್ದೇನು?
"ನಮ್ಮ 45 ಸಿನಿಮಾದ ಟ್ರೇಲರ್ ರಿಲೀಸ್ ಇವೆಂಟ್ ಡಿಸೆಂಬರ್ 15ರಂದು ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಶಂಕರ್ ನಾಗ್ ಸರ್ಕಲ್ ಹತ್ತಿರದ ಕೆಂಪೇಗೌಡ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಈವರೆಗೂ ಯಾರು ಮಾಡಿರದ ವಿಭಿನ್ನ ಪ್ರಯತ್ನವನ್ನು ಮಾಡುತ್ತಿದ್ದೇವೆ. ಬೆಂಗಳೂರಿನಲ್ಲಿ ನಡೆಯುವ ಇವೆಂಟ್ ಅನ್ನು ಕರ್ನಾಟಕದ ಏಳು ಪ್ರಮುಖ ಜಿಲ್ಲೆಗಳ ಚಿತ್ರಮಂದಿರದಲ್ಲಿ ಕ್ಯೂಬ್ ಮೂಲಕ ನೇರ ಪ್ರಸಾರ ಮಾಡಲಾಗುವುದು. ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಶಿವಮೊಗ್ಗ, ಹೊಸಪೇಟೆ, ಹುಬ್ಬಳ್ಳಿಯಲ್ಲಿ ಚಿತ್ರಮಂದಿರಗಳಲ್ಲಿ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ" ಎಂದು ಅರ್ಜುನ್ ಜನ್ಯ ಹೇಳಿದ್ದಾರೆ.
45 Movie: ವಿಭಿನ್ನ ವಿಡಿಯೋ ಮೂಲಕ ‘45’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಚಿತ್ರತಂಡ!
ಡಿಸೆಂಬರ್ 15ರಂದು ಮತ್ತೊಂದು ಸರ್ಪ್ರೈಸ್
"ಅಭಿಮಾನಿಗಳಿಗೆ ಆಯಾ ಜಿಲ್ಲೆಗಳಲ್ಲಿ ಪಾಸ್ ವ್ಯವಸ್ಥೆ ಮಾಡಲಾಗಿದ್ದು, ಉಚಿತ ಪ್ರವೇಶವಿರುತ್ತದೆ. ಏಕಕಾಲಕ್ಕೆ ಏಳು ಊರುಗಳಲ್ಲೂ ಟ್ರೇಲರ್ ಅನಾವರಣವಾಗಲಿದೆ. ಟ್ರೇಲರ್ ವೀಕ್ಷಣೆಯ ನಂತರ ಅಭಿಮಾನಿಗಳನ್ನುದ್ದೇಶಿಸಿ ಚಿತ್ರದ ಮೂವರು ನಾಯಕರು ಮಾತನಾಡಲಿದ್ದಾರೆ. ಇಲ್ಲಿಯವರೆಗೂ ಯಾರೂ ಈ ಥರದ ಪ್ರಯತ್ನ ಮಾಡಿಲ್ಲ. ಇಷ್ಟೇ ಅಲ್ಲದೆ ಟ್ರೇಲರ್ ಬಿಡುಗಡೆ ದಿನ ಮತ್ತೊಂದು ವಿಶೇಷ ಕೂಡ ಇರಲಿದೆ. ಅದು ಏನೆಂದು ಎಲ್ಲರಿಗೂ ಆ ದಿನವೇ ತಿಳಿಯುತ್ತದೆ. ಡಿಸೆಂಬರ್ 15ರ ನಂತರ ಚಿತ್ರತಂಡ ಪ್ರಚಾರದ ನಿಮಿತ್ತವಾಗಿ ಬೇರೆ ರಾಜ್ಯಗಳಿಗೆ ಭೇಟಿ ನೀಡಲಿದೆ" ಎಂದು ನಿರ್ದೇಶಕ ಅರ್ಜುನ್ ಜನ್ಯ ತಿಳಿಸಿದರು.
Johnson George: ಒಂದೇ ಸಿನಿಮಾದಲ್ಲಿ 45 ವಿಭಿನ್ನ ಪಾತ್ರದ ಮೂಲಕ ನಟಿಸಿ ಗಿನ್ನಿಸ್ ದಾಖಲೆ ಬರೆದ ಆ ನಟ ಯಾರು?
"ಭಾರತದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಈ ಚಿತ್ರವನ್ನು ನಿರ್ಮಿಸಿರುವ ಹೆಮ್ಮೆ ಇದೆ. ಅದನ್ನು ಜನರು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆಯೂ ಇದೆ. ಡಿಸೆಂಬರ್ 15 ರ ಟ್ರೇಲರ್ ಬಿಡುಗಡೆ ಸಮಾರಂಭ ವಿಭಿನ್ನವಾಗಿ ನಡೆಯಲಿದೆ" ಎನ್ನುತ್ತಾರೆ ನಿರ್ಮಾಪಕ ರಮೇಶ್ ರೆಡ್ಡಿ. ಕರ್ನಾಟಕದ ಪ್ರಮುಖ ಏಳು ಊರುಗಳ ಚಿತ್ರಮಂದಿರದಲ್ಲಿ ಕ್ಯೂಬ್ ಬಳಸಿ ಪ್ರದರ್ಶಿಸಲು ಆ ಸಂಸ್ಥೆಯನ್ನು ಸಂಪರ್ಕಿಸಲಾಗಿದೆಯಂತೆ.