ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chandanavana Film Critics Awards: ಅತ್ಯುತ್ತಮ ನಟ ರಿಷಬ್ ಶೆಟ್ಟಿ, ಅತ್ಯುತ್ತಮ ನಟಿ ಆಶಿಕಾ ರಂಗನಾಥ್; 9 ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡ ʻಕಾಂತಾರ 1ʼ

Chandanavana Film Critics Awards: 7ನೇ ವರ್ಷದ ಚಂದನವನ ಫಿಲ್ಮ್‌ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2025ನೇ ಸಾಲಿನ ಅತ್ಯುತ್ತಮ ಸಾಧಕರನ್ನು ಗೌರವಿಸಲಾಯಿತು. 'ಕಾಂತಾರ: ಚಾಪ್ಟರ್ 1' ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಹಾಗೂ ನಿರ್ದೇಶಕ ಪ್ರಶಸ್ತಿ ಪಡೆದರೆ, ಆಶಿಕಾ ರಂಗನಾಥ್ 'ಗತ ವೈಭವ' ಚಿತ್ರಕ್ಕಾಗಿ ಅತ್ಯುತ್ತಮ ನಟಿಯಾಗಿ ಹೊರಹೊಮ್ಮಿದರು.

ಸಿನಿಮಾ ಪತ್ರಕರ್ತರ ಹೆಮ್ಮೆಯ 7ನೇ ವರ್ಷದ ಚಂದನವನ ಫಿಲ್ಮ್‌ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಕನ್ನಡ ಸಿನಿಮಾಗಳಲ್ಲಿ ಆಯ್ದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅತ್ಯುತ್ತಮ ನಟ ಪ್ರಶಸ್ತಿಯು ʻಕಾಂತಾರ: ಚಾಪ್ಟರ್‌ 1ʼ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾದರೆ, ಅತ್ಯುತ್ತಮ ನಟಿ ಪ್ರಶಸ್ತಿಯು ʻಗತ ವೈಭವʼ ಚಿತ್ರದ ನಟನೆಗಾಗಿ ಆಶಿಕಾ ರಂಗನಾಥ್ ಪಡೆದರು.

2025ನೇ ಸಾಲಿನ ಅತ್ಯುತ್ತಮ ಸಿನಿಮಾ ಪ್ರಶಸ್ತಿ ʻಕಾಂತಾರ: ಚಾಪ್ಟರ್‌ 1ʼ ಚಿತ್ರದ ಪಾಲಾಯಿತು. ಈ ಸಿನಿಮಾವು ಒಟ್ಟು 9 ವಿಭಾಗದಲ್ಲಿ ಪ್ರಶಸ್ತಿ ಪಡೆಯಿತು. ಕನ್ನಡದ ಟಾಕಿ ಚಿತ್ರಗಳ ಪ್ರಥಮ ಹೀರೋ ಸುಬ್ಬಯ್ಯ ನಾಯ್ಡು ಅವರ ಮರಿಮೊಮ್ಮಗ ಸುಕ್ರತ್ ಸೃಜನ್ ಲೋಕೇಶ್ ಅವರಿಗೆ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೀವಮಾನ ಸಾಧನೆಯ ಗೌರವವನ್ನು ಹಿರಿಯ ನಿರ್ದೇಶಕ ರಾಜೇಂದ್ರ್ ಸಿಂಗ್ ಬಾಬು ಅವರಿಗೆ ನೀಡಲಾಯಿತು.

Koragajja Movie: ʼಕೊರಗಜ್ಜʼ ಸಿನಿಮಾ ಮೂಲಕ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸ್ತಾರಾ ಶ್ರುತಿ? ನಟಿಗೆ ಶುಭ ಹಾರೈಸಿದ ಚಿತ್ರತಂಡ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ನೇ ಸಾಲಿನ ಪ್ರಶಸ್ತಿ ಪಟ್ಟಿ

  • ಅತ್ಯುತ್ತಮ ಚೊಚ್ಚಲ ನಿರ್ಮಾಣ: ನಿವೇದಿತಾ ಶಿವರಾಜ್ ಕುಮಾರ್ (ಫೈರ್ ಪ್ಲೈ)
  • ಅತ್ಯುತ್ತಮ ಚೊಚ್ಚಲ ಬರಹಗಾರ: ಸುಮಂತ್ ಭಟ್ ( ಮಿಥ್ಯ)
  • ಅತ್ಯುತ್ತಮ ಚೊಚ್ಚಲ ಸಿನಿಮಾ ನಿರ್ದೇಶನ: ಭೀಮರಾವ್ ಪಿ (ಹೆಬ್ಬುಲಿ ಕಟ್)
  • ಅತ್ಯುತ್ತಮ ಚೊಚ್ಚಲ ನಟಿ: ಪ್ರಿಯಾಂಕಾ ಆಚಾರ್ ( ಏಳುಮಲೆ)
  • ಅತ್ಯುತ್ತಮ ಚೊಚ್ಚಲ ನಟ: ಕಿರಿಟಿ (ಜ್ಯೂನಿಯರ್) ಹಾಗೂ ದುಷ್ಯಂತ್ (ಗತ ವೈಭವ)
  • ಅತ್ಯುತ್ತಮ ಬಾಲ ನಟ: ಅತೀಶ್ ಶೆಟ್ಟಿ (ಮಿಥ್ಯ)
  • ಅತ್ಯುತ್ತಮ ವಿಎಫ್‌ಎಕ್ಸ್: ಕೆ. ವಿ. ಸಂಜಿತ್ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಕಲಾ ನಿರ್ದೇಶನ : ಬೆಂಗಲನ್ ಮತ್ತು ಧರಣಿ ಗಂಗಾಪುತ್ರ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಸಾಹಸ ನಿರ್ದೇಶನ: ಅರ್ಜುನ್ ರಾಜ್ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಸಂಕಲನ: ಕೆ. ಎಂ. ಪ್ರಕಾಶ್ (ಏಳುಮಲೆ)
  • ಅತ್ಯುತ್ತಮ ಸಂಭಾಷಣೆ: ಜೆ.ಪಿ. ತುಮಿನಾಡು (ಸು ಫ್ರಂ ಸೋ)
  • ಅತ್ಯುತ್ತಮ ಸಿನಿಮಾಟೋಗ್ರಫಿ: ಅರವಿಂದ್ ಕಶ್ಯಪ್ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ನೃತ್ಯ ನಿರ್ದೇಶನ: ವಿನಾಯಕ ಆಚಾರ್ಯ (ಸು ಫ್ರಂ ಸೋ)
  • ಅತ್ಯುತ್ತಮ ಗಾಯಕ: ಅಬ್ಬಿ ವಿ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಗಾಯಕಿ: ಸಾನ್ವಿ ಸುದೀಪ್ (ಮಾರ್ಕ್)
  • ಅತ್ಯುತ್ತಮ ಚಿತ್ರ ಸಾಹಿತ್ಯ: ಸಿಂಪಲ್ ಸುನಿ (ಗತ ವೈಭವ)
  • ಅತ್ಯುತ್ತಮ ಹಿನ್ನೆಲೆ ಸಂಗೀತ: ಸಂದೀಪ್ ತುಳಸಿದಾಸ್ (ಸು ಫ್ರಂ ಸೋ)
  • ಅತ್ಯುತ್ತಮ ಸಂಗೀತ: ಅಜನೀಶ್ ಲೋಕನಾಥ್ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ಚಿತ್ರಕಥೆ: ಪುನೀತ್ ರಂಗಸ್ವಾಮಿ (ಏಳುಮಲೆ)
  • ಅತ್ಯುತ್ತಮ ಸಹ ನಟಿ: ಸಂಧ್ಯಾ ಅರಕೆರೆ (ಸು ಫ್ರಂ ಸೋ)
  • ಅತ್ಯುತ್ತಮ ಸಹ ನಟ: ಮಹಾಂತೇಶ್ ಹಿರೇಮಠ (ಹೆಬ್ಬುಲಿ ಕಟ್)
  • ಅತ್ಯುತ್ತಮ ನಿರ್ದೇಶಕ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್ 1)
  • ಅತ್ಯುತ್ತಮ ನಟಿ: ಆಶಿಕಾ ರಂಗನಾಥ್ ( ಗತ ವೈಭವ)
  • ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್
  • ಅತ್ಯುತ್ತಮ ಚಿತ್ರ: ಕಾಂತಾರ ಚಾಪ್ಟರ್ 1
  • ಜೀವಮಾನ ಸಾಧನೆ ಪ್ರಶಸ್ತಿ: ಎಸ್.ವಿ.ರಾಜೇಂದ್ರ ಸಿಂಗ್ ಬಾಬು

Kandeelu Movie: ʼಕಂದೀಲುʼ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ: ನಿರ್ದೇಶಕಿ ಯಶೋದ ಪ್ರಕಾಶ್‌

ಸಮಾರಂಭದಲ್ಲಿ ಹಾಜರಿದ್ದ ಗಣ್ಯರು

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಈ ಅದ್ಧೂರಿ ಹಾಗೂ ವರ್ಣರಂಜಿತ ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ಬಿ.ಸುರೇಶ, ಗಿರಿಜಾ ಲೋಕೇಶ್, ಪೂಜಾ ಗಾಂಧಿ, ಬಿಗ್‌ ಬಾಸ್‌ ಅಶ್ವಿನಿ ಗೌಡ, ಮಾಸ್ಟರ್ ಮಂಜುನಾಥ್, ಟೈಟಲ್ ಸ್ಪಾನ್ಸರ್ ಅಂಬರ್ಸ್ಟೋನ್ ಪ್ರಾಪರ್ಟೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಯಶ್ವಂತ್ ಕುಮಾರ್, ಕಿರಣ್ ಕುಮಾರ್, ಕೀರ್ತಿ, ಅಶ್ವಸೂರ್ಯ ರಿಯಾಲಿಟಿಸ್ ಡೈರೆಕ್ಟರ್ ಎಸ್ ರಂಜಿತ್ ಕುಮಾರ್, ಅಲೈನ್ಸ್ ಯೂನಿವರ್ಸಿಟಿಯ ರೆಜಿಸ್ಟರ್ ಸುರೇಖಾ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು.