Ambareesh Grandson: ಅಂಬರೀಶ್ ಮೊಮ್ಮಗನ ನಾಮಕರಣ ಶಾಸ್ತ್ರ; ಕಾರ್ಯಕ್ರಮದಲ್ಲಿ ಜೋಡೆತ್ತು ನಾಪತ್ತೆ
ಸ್ಯಾಂಡಲ್‌ವುಡ್ ಹಿರಿಯ ನಟ ದಿ. ಅಂಬರೀಶ್ ಮೊಮ್ಮಗನ ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಕೆಲವು ದಿನಗಳಿಂದ ಅಂಬಿ ಕುಟುಂಬದಿಂದ ಅಂತರ ಕಾಯ್ದುಕೊಂಡಿರುವ ದರ್ಶನ್ ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ ಎನ್ನಲಾಗಿದೆ. ಇನ್ನು ಟಾಕ್ಸಿಕ್ ಸಿನಿಮಾ ಶೂಟಿಂಗ್‌ನಲ್ಲಿ ಫುಲ್ ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್ ಬರೋದು ಬಹುತೇಕ ಡೌಟ್ ಎನ್ನಲಾಗಿದೆ.


ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ದಿ. ಅಂಬರೀಶ್ ಮೊಮ್ಮಗನ(Ambareesh grandson)ನಾಮಕರಣ ಶಾಸ್ತ್ರ ಇಂದು JW ಮ್ಯಾರಿಯೆಟ್ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಕುಟುಂಬಸ್ಥರು ಹಾಗೂ ಆತ್ಮೀಯರು ಭಾಗಿಯಾಗಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ ನಟ ದರ್ಶನ್, ಯಶ್ ಆಗಮಿಸುತ್ತಾರೆಯೇ ಎಂಬ ಬಗ್ಗೆ ಕುತೂಹಲ ಎಲ್ಲರಲ್ಲಿ ಮೂಡಿದೆ. ಕೆಲವು ದಿನಗಳಿಂದ ಅಂಬಿ ಕುಟುಂಬದಿಂದ ಅಂತರ ಕಾಯ್ದುಕೊಂಡಿರುವ ದರ್ಶನ್ ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ ಎನ್ನಲಾಗಿದೆ. ಇನ್ನು ಟಾಕ್ಸಿಕ್ ಸಿನಿಮಾ ಶೂಟಿಂಗ್‌ನಲ್ಲಿ ಫುಲ್ ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್ ಬರೋದು ಬಹುತೇಕ ಡೌಟ್ ಎನ್ನಲಾಗಿದೆ.
ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ದರ್ಶನ್ ಅವರನ್ನು ಸುಮಲತಾ ಅವರು ನನ್ನ ದೊಡ್ಮಗ ಎಂದು ಹೇಳುತ್ತಿದ್ದರು. ಆದರೆ, ಏಕಾಏಕಿ ದರ್ಶನ್ ಅವರು, ಸುಮಲತಾ ಸೇರಿ ಹಲವರನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್‌ಫಾಲೋ ಮಾಡಿರುವುದರಿಂದ ಇಬ್ಬರ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.
ನಟ ದರ್ಶನ್ ಅವರು ಇನ್ಸ್ಟಾಗ್ರಾಮ್ನಲ್ಲಿ ಕೆಲವೇ ಕೆಲವರನ್ನು ಫಾಲೋ ಮಾಡುತ್ತಾ ಇದ್ದರು. ಆ ಪೈಕಿ ಸುಮಲತಾ, ಅಭಿಷೇಕ್ ಅಂಬರೀಷ್, ಅಭಿ ಪತ್ನಿ ಅವಿವಾ, ಪುತ್ರ ವಿನೀಶ್, ಡಿ ಕಂಪನಿ ಇದ್ದವು. ಆದರೆ, ಈಗ ಅವರು ಎಲ್ಲರನ್ನೂ ಅನ್‌ಫಾಲೋ ಮಾಡಿದ್ದರು. ಈ ಪೈಕಿ ಸುಮಲತಾ ಅವರನ್ನು ಅನ್‌ಫಾಲೋ ಮಾಡಿರುವುದು ಚರ್ಚೆಗೆ ಗ್ರಾಸವಾಗಿತ್ತು.
ಇನ್ನು ದರ್ಶನ್ ಅನ್‌ಫಾಲೋ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಹಾಕಿದ್ದರು. ಅದರಲ್ಲಿ ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ... ಯಾರು ಸತ್ಯವನ್ನು ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆ’ ಎಂದು ಸುಮಲತಾ ಬರೆದುಕೊಂಡಿದ್ದರು.
ಈ ಸುದ್ದಿಯನ್ನೂ ಓದಿ: Actor Darshan: ಮಂಡ್ಯದಲ್ಲಿ ಸುಮಲತಾ ವಿರುದ್ಧ ದರ್ಶನ್ ಸ್ಪರ್ಧೆ: ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಫೋಟಕ ಭವಿಷ್ಯ
ಸುಮಲತಾ ಹಾಗೂ ದರ್ಶನ್ ಕುಟುಂಬದ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಈ ವಿಚಾರವಾಗಿ ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ (Sumalatha Ambareesh) ಅವರು ಪ್ರತಿಕ್ರಿಯೆ ನೀಡಿದ್ದು, ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ನನ್ನ ಹಿಂದಿನ ಒಂದು ಪೋಸ್ಟ್ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಬಗ್ಗೆ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ, ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ. ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸವನ್ನು ನಾನು ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು.